ಬಸವನಬಾಗೇವಾಡಿ: ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರ ೫೧೫ನೇ ಜಯಂತಿಯನ್ನು ಜೂ. ೨೭ ರಂದು ಬೆಳಗ್ಗೆ ೧೦ ಗಂಟೆಗೆ ಎಲ್ಲ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯಲ್ಲಿ ಆಚರಿಸಿದ ನಂತರ ಬಸವನಬಾಗೇವಾಡಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕಾಡಳಿತ ಹಮ್ಮಿಕೊಂಡಿರುವ ನಾಡಪ್ರಭು ಕೆಂಪೇಗೌಡ ಅವರ ೫೧೫ ನೇ ಜಯಂತೋತ್ಸವ ಕಾರ್ಯಕ್ರಮಕ್ಕೆ ಹಾಜರಾಗಬೇಕೆಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.
ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿಯಂಗವಾಗಿ ಬುಧವಾರ ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ತಹಸೀಲ್ದಾರ ಕಚೇರಿಯಲ್ಲಿಯೂ ಮೊದಲು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಮಾಡಲಾಗುವುದು. ನಂತರ ತಾಲೂಕಾಡಳಿದಿಂದ ಸ್ಥಳೀಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವ ನಾಡಪ್ರಭು ಕೆಂಪೇಗೌಡ ಜಯಂತೋತ್ಸವ ಕಾರ್ಯಕ್ರಮಕ್ಕೆ ತೆರಳುವದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜವಳಿ, ಕಬ್ಬು, ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ, ಬೃಹತ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಘನಉಪಸ್ಥಿತಿ ವಹಿಸುವರು. ಮುಖ್ಯಅತಿಥಿಗಳಾಗಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ, ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಸಂಸದರಾದ ರಮೇಶ ಜಿಗಜಿಣಗಿ, ಸುಧಾ ಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಶಾಸಕ ಭೀಮನಗೌಡ(ರಾಜುಗೌಡ) ಪಾಟೀಲ ಆಗಮಿಸುವರು. ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಧ್ಯಾಪಕಿ ವಿಜಯಲಕ್ಷ್ಮೀ ಉಪನ್ಯಾಸ ನೀಡುವರು ಎಂದರು.
ಸರ್ಕಾರದ ನಿರ್ದೇಶನದಂತೆ ನಾಡಪ್ರಭು ಕೆಂಪೇಗೌಡ ಜಯಂತಿಯಂಗವಾಗಿ ಈಗಾಗಲೇ ತಾಲೂಕಿನಲ್ಲಿರುವ ೪೬ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಾಡಪ್ರಭು ಕೆಂಪೇಗೌಡ ಅವರ ಕುರಿತು ಭಾಷಣ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಜಯಂತೋತ್ಸವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದರು.
ಸಭೆಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ, ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಸಿ.ಜಿ.ಬಿರಾದಾರ, ಉಪಖಜಾನೆ ಅಧಿಕಾರಿ ಮನೋಜಕುಮಾರ ಪಾಟೀಲ, ಆರೋಗ್ಯ ಇಲಾಖೆಯ ಎಸ್.ಎಸ್.ಮೇಟಿ, ತಾಲೂಕು ಪಂಚಾಯಿತಿಯ ಶಶಿಧರ ಪಾಟೀಲ, ಶಿಕ್ಷಣ ಇಲಾಖೆಯ ಎ.ಎಸ್.ಗುಬ್ಬಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಮುಖಂಡರು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment
