Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಸ್‌ಪಾಸ್ ವಿತರಣೆ & ಬಸ್‌ಗಳ ಹೆಚ್ಚಳಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಬಸ್‌ಪಾಸ್ ವಿತರಣೆ & ಬಸ್‌ಗಳ ಹೆಚ್ಚಳಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ : ಎಬಿವಿಪಿ ವಿಜಯಪುರ ಶಾಖೆ ವತಿಯಿಂದ ಜಿಲ್ಲೆಯ ಕೇಂದ್ರ ಬಸ್ ನಿಲ್ದಾಣ ಮುಂದೆ ವಿದ್ಯಾರ್ಥಿಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ಬಸ್ ಪಾಸ್ ವಿತರಿಸುವಂತೆ ಹಾಗೂ ಬಸ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ಬುಧವಾರ ಎಬಿವಿಪಿ ಕಾರ್ಯಕರ್ತರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.
ಬಳಿಕ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಜಯಪುರ ಶಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿ ಸಚೀನ ಕುಳಗೇರಿ ಮಾತನಾಡಿ, ರಾಜ್ಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಪಡೆಯಲು ಅತೀ ಹೆಚ್ಚು ನಗರ ಪ್ರದೇಶಗಳ ಶಾಲಾ ಕಾಲೇಜುಗಳಿಗೆ ಬರುತ್ತಾರೆ, ವಿದ್ಯಾರ್ಥಿಗಳ ತರಗತಿಗಳು ಪ್ರಾರಂಭವಾದ ನಂತರ ಸರಿಯಾದ ಸಮಯಕ್ಕೆ ಬಸ್ ಪಾಸ್ ಅನ್ನು ವಿತರಣೆ ಮಾಡದೇ ಇರುವ ಕಾರಣ ಪ್ರತಿದಿನ ನೂರಾರು ರೂಪಾಯಿಗಳನ್ನು ಖರ್ಚು ಮಾಡಿಕೊಂಡು ಬಡ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುವುದು ಕಷ್ಟದ ಸಂಗತಿ ಆಗಿದೆ. ಸರ್ಕಾರ ಶಾಲಾ ಕಾಲೇಜುಗಳು ಪ್ರಾರಂಭವಾದ ತಕ್ಷಣವೇ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅನ್ನು ಸಕಾಲದಲ್ಲಿ ಒದಗಿಸುವ ನಿಟ್ಟಿನಲ್ಲಿ ಹೆಚ್ಚು ಸಿಬ್ಬಂದಿಗಳನ್ನು ಬಳಸಿಕೊಂಡು ಬಸ್ ಪಾಸ್ ಒದಗಿಸುವ ಅವಶ್ಯಕತೆ ಇದೆ, ಬಸ್ ಪಾಸ್ ಗೆ ಅರ್ಜಿ ಸಲ್ಲಿಸಿದ ನಂತರ ವಾರಗಳ ಕಾಲ ವಿದ್ಯಾರ್ಥಿಗಳು ಬಸ್ ಪಾಸ್ ಅನ್ನು ಪಡೆಯಲು ಕಾಯುವ ಸ್ಥಿತಿ ರಾಜ್ಯದಲ್ಲಿ ಇದೆ, ಇದರಿಂದ ಬಡ ವಿದ್ಯಾರ್ಥಿಗಳು ಶಾಲಾ – ಕಾಲೇಜುಗಳಿಗೆ ಬಸ್ ಪಾಸ್ ಸಿಗುವರೆಗೂ ಬರದೆ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದರು.
ಜಿಲ್ಲಾ ಸಂಚಾಲಕ ಮಂಜುನಾಥ ಹಳ್ಳಿ ಮಾತನಾಡಿ, ರಾಜ್ಯದಲ್ಲಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿ ಬಹಳಷ್ಟು ವ್ಯತ್ಯಾಸವಿದ್ದು, ವಿಶ್ವವಿದ್ಯಾಲಯಗಳ ಶೈಕ್ಷಣಿಕ ವೇಳಾಪಟ್ಟಿಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಬಸ್‌ಪಾಸ್ ವಿತರಣೆ ಮಾಡುವಂತೆ ಕ್ರಮಕೈಗೊಳ್ಳಬೇಕು. ಹಾಗೂ ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಿರುವುದ್ದರಿಂದ ಮಹಿಳೆಯರು ವಿನಾಕಾರಣ ಕೆಲಸವಿಲ್ಲದೇ ಬಸ್‌ಗಳಲ್ಲಿ ಹೆಚ್ಚು ಓಡಾಡುತ್ತಿರುವುದ್ದರಿಂದ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡದೆ ಇರುವುದರಿಂದ ವಿದ್ಯಾರ್ಥಿಗಳಿಗೆ ಬಸ್ ಗಳಲ್ಲಿ ಓಡಾಟ ಮಾಡಲು ಬಹಳ ಕಷ್ಟವಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಬಸ್ಸಿನ ಬಾಗಿಲಲ್ಲಿ ನಿಂತು ಅಪಾಯದ ಪ್ರಯಾಣವನ್ನು ಮಾಡುವುದು ಕಂಡು ಬರುತ್ತಿದೆ, ಸರಕಾರ ಬಸ್‌ಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ನಿರ್ಧಾರ ಮಾಡಬೇಕು, ಯಾವ ಹಳ್ಳಿಗಳಿಗೆ ಬಸ್ ಗಳ ಕೊರತೆ ಇದೆ ಆ ಹಳ್ಳಿಗಳಿಗೆ ಸಮರ್ಪಕವಾದ ಬಸ್ ಗಳ ವ್ಯವಸ್ಥೆಯನ್ನು ಶಾಲಾ-ಕಾಲೇಜುಗಳ ಸಮಯಕ್ಕೆ ಒದಗಿಸಬೇಕೆಂದು ಒತ್ತಾಯ ಪಡಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ವಿಭಾಗ ಸಂಘಟನಾ ಕಾರ್ಯದರ್ಶಿ ಹರ್ಷಾ ನಾಯಕ, ಮಲ್ಲಿಕಾರ್ಜುನ ಮಾಳಿ, ಶ್ರೀಕಾಂತ ರೆಡ್ಡಿ, ಸಂದೀಪ ಅರಳಗುಂಡಗಿ, ಕವಿತಾ ಬಿರಾದಾರ, ಐಶ್ವರ್ಯ ಆಸಂಗಿ, ಆರತಿ ನಾವಿ, ಶಿಲ್ಪಾ ಪೂಜಾರಿ, ಬಾಲಾಜಿ ಬಿರಾದಾರ, ಶಿವಾಜಿ, ಶ್ರೀಕಾಂತ, ಸ್ನೇಹಾ ಹಿರೇಮಠ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.