Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ

ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ

ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತ್ತಮ ಆಡಳಿತಗಾರರಾಗಿದ್ದ ಕೆಂಪೇಗೌಡರು :ಎಡಿಸಿ ಮುರಗಿ
(ರಾಜ್ಯ ) ಜಿಲ್ಲೆ

ಉತ್ತಮ ಆಡಳಿತಗಾರರಾಗಿದ್ದ ಕೆಂಪೇಗೌಡರು :ಎಡಿಸಿ ಮುರಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾಡಳಿತದಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ವಿಜಯಪುರ: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿವುಳ್ಳ ವಿಚಾರ-ಯೋಜನೆಗಳು ನಾಡಿನ ಸರ್ವೋತ್ತಮ ಬೆಳವಣಿಗೆಗೆ ಸಹಕಾರಿಯಾಗಿದ್ದು, ಅವರು ಓರ್ವ ಉತ್ತಮ ಆಡಳಿತಗಾರರಾಗಿದ್ದರು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮವದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ‌ ನೀಡಿ ಅವರು ಮಾತನಾಡಿದರು.
ನಾಡಿಗಾಗಿ ತಮ್ಮದೇ ಆದ ವಿಶಿಷ್ಟ ಸೇವೆ ಸಲ್ಲಿಸಿದ ವ್ಯಕ್ತಿಗಳ ನೆನಪಿಡುವ ದೃಷ್ಟಿಯಲ್ಲಿ ಅಂತಹ ಮಹನೀಯರ ಜಯಂತಿಗಳನ್ನು ಆಚರಿಸಲಾಗುತ್ತಿವೆ. ಮಹಾನ್ ವ್ಯಕ್ತಿಗಳು ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿರುವುದಿಲ್ಲ. ಕೆಂಪೇಗೌಡರು ಎಲ್ಲ ವರ್ಗದ ಹಿತವನ್ನು ಬಯಸುವಂತವರಾಗಿದ್ದರು. ಹಿಂದೆ ಹಲವಾರು ರಾಜರ ಸಂಸ್ಥಾನಗಳು ಆಳ್ವಿಕೆ ಮಾಡಿವೆ ಅದರಲ್ಲಿ ಆಡಳಿತ ಒಂದು ಭಾಗವಾಗಿತ್ತು. ಆಡಳಿತ ಮೇಲೆಯೇ ರಾಜ್ಯಭಾರ ಮಾಡುತ್ತಿದ್ದರು ನಾಡ ಪ್ರಭು ಕೆಂಪೆಗೌಡರು ನಗರಗಳನ್ನು ನಿರ್ಮಾಣ ಮಾಡುವುದರಲ್ಲಿ ಹಾಗೂ ನಗರಗಳು ಸರ್ವೋತ್ತಮುಖ ಬೆಳೆವಣಿಗೆಗಾಗಿ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ಒಂದು ನಗರವನ್ನು ನಿರ್ಮಿಸಲು ಮುಂದಿನ ನೂರಾರು ವರ್ಷಗಳ ಕಾಲ ಬಾಳುವ ಹಾಗೆ ಯೋಜನೆಗಳನ್ನು ರೂಪಿಸುತ್ತಿದ್ದರು. ಬೆಂಗಳೂರಿನ ಸುತ್ತ ಮುತ್ತಲಿನ ಅನುಕೂಲಕರವಾಗಿರುವ ವಾತಾವರಣವನ್ನು ಗಮನಿಸಿ ಬೆಂಗಳೂರು ನಗರವನ್ನು ವ್ಯವಸ್ಥಿತವಾಗಿ ನಿರ್ಮಾಣ ಮಾಡಿರುವುದಕ್ಕೆ ಅವರನ್ನು ನಾಡ ಪ್ರಭು ಕೆಂಪೆಗೌಡರು ಎಂದು ಕರೆಯಲಾಗುತ್ತದೆ ಎಂದು ಹೇಳಿದರು.
ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ ಉಪನ್ಯಾಸ ನೀಡಿ, ನಾಡಿಗಾಗಿ ಸಮರ್ಪಣಾ ಭಾವದಿಂದ ಕೆಲಸ ಮಾಡಿ ಕರ್ತವ್ಯ ನಿಷ್ಠೆ ಮೆರೆದು ತ್ಯಾಗ ಬಲಿದಾನ ಮಾಡಿದ ಕೆಂಪೇಗೌಡರ ಬದುಕು ನಮಗೆಲ್ಲ ಮಾದರಿಯಾಗಿದೆ. ಅವರ ಆಡಳಿತದಲ್ಲಿ ದೂರದೃಷ್ಟಿ ಯೋಜನಾ ಬದ್ಧವಾಗಿ ಕಾರ್ಯಗಳನ್ನು ನಿರ್ವಹಿಸುವ ರೀತಿ ನಿಸ್ವಾರ್ಥ ಸೇವೆ ನಮಗೆಲ್ಲ ಪ್ರೇರಣೆಯಾಗಿದೆ. ಬೆಂಗಳೂರು ನಗರ ಜಗತ್ತಿನಾದ್ಯಂತ ಪ್ರಚಲಿತವಾಗಲು ಕೆಂಪೇಗೌಡರ ಯೋಜನಾ ಬದ್ದ ಕಾರ್ಯವೇ ಕಾರಣವಾಗಿದೆ ಎಂದು ಹೇಳಿದರು.
ನಾಡ ಪ್ರಭು ಕೆಂಪೇಗೌಡರ ಕುರಿತು ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನ್ನಾನ ಅಬ್ದುಲ್ ಹಮೀದ ಮುಶ್ರೀಪ್, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ತಹಶೀಲ್ಧಾರ ಕವಿತಾ, ಜಿಲ್ಲಾ ಪಂಚಾಯತ ಅಧಿಕಾರಿ ಅನುಸೂಯಾ ಚಲವಾದಿ, ಮಹಾನಗರ ಪಾಲಿಕೆ ಆಯುಕ್ತರಾದ ಬದ್ರುದ್ದೀನ ಸೌದಾಗರ, ರವಿಕಾಂತ ಬಿರಾದಾರ, ಸಂಕೇತಗೌಡ ಬ್ಯಾಕೋಡ, ಸಿದ್ದು ಹೊಸಮನಿ, ವಸಂತ ಹಂಡಿ, ಕೃಷ್ಣ ಚವ್ಹಾಣ, ಸಿದ್ದು ಆಚೆಗಾವ್, ಭೀಮರಾಯ ಜಿಗಜಿಣಗಿ, ಜಿಲ್ಲಾದಿಕಾರಿಗಳ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೊಷ ಬೋವಿ ಸ್ವಾಗತಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ

ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ

ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ

ಪಿಯುಸಿ: ತುಪ್ಪದ ಸಹೋದರಿಯರ ಅತ್ಯುತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
  • ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪಿಯುಸಿ: ತುಪ್ಪದ ಸಹೋದರಿಯರ ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕಿಯ ವರ್ಗಾವಣೆಗೆ ನೊಂದ ಮಕ್ಕಳಿಂದ ಭಾವುಕ ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಏ.೧೫ ರಿಂದ ಮಕ್ಕಳ ಚರ್ಮರೋಗಗಳಿಗೆ ಉಚಿತ ತಪಾಸಣೆ & ಚಿಕಿತ್ಸೆ
    In (ರಾಜ್ಯ ) ಜಿಲ್ಲೆ
  • ಶಾಲೆ ಮಾನ್ಯತೆ-ನವೀಕರಣದ ಹೆಸರಲ್ಲಿ ಕೋಟ್ಯಂತರ ರೂ. ಲೂಟಿ!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ :೩೪೦ ಮೊಬೈಲ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಬೇಸಿಗೆ ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು
    In (ರಾಜ್ಯ ) ಜಿಲ್ಲೆ
  • ಪ್ರೇಮಿಗಳ ಹೃದಯದಲ್ಲಿ ರಂಗಭೂಮಿಗೆ ಸ್ಥಾನ :ಬನಸೋಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.