Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶ್ರೀ ಅರವಿಂದರು: ಆಧ್ಯಾತ್ಮಿಕ ಸಾಧನೆ ಮತ್ತು ಪೂರ್ಣಯೋಗ

ದಿಟ್ಟ ಗಣಾಚಾರಿ ಶರಣೆ ಗೊಗ್ಗವ್ವೆ

ನಾನು ಸಹ ಮುಖವಾಡ ಧರಿಸಲೇಬೇಕಾಯಿತು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾಡಪ್ರಭು ಕೆಂಪೇಗೌಡರ ಆಡಳಿತ ಸ್ಮರಣೀಯ :ಸೋಮನಕಟ್ಟಿ
(ರಾಜ್ಯ ) ಜಿಲ್ಲೆ

ನಾಡಪ್ರಭು ಕೆಂಪೇಗೌಡರ ಆಡಳಿತ ಸ್ಮರಣೀಯ :ಸೋಮನಕಟ್ಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಸರ್ಕಾರ ಇಂದು ನಾಡಿನಲ್ಲಿ ಮಹಾತ್ಮರ-ಶರಣರ-ಮಹನೀಯರ ಸಾಧನೆ, ತತ್ವ-ಸಂದೇಶಗಳನ್ನು ಯುವಜನಾಂಗ ಸೇರಿದಂತೆ ಎಲ್ಲರಿಗೂ ತಿಳಿಸುವ ಉದ್ದೇಶದಿಂದ ಅವರ ಜಯಂತಿ ಕಾರ್ಯಕ್ರಮ, ಸ್ಮರಣೀಯ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ನಾಡಿನಲ್ಲಿ ಉತ್ತಮ ಆಡಳಿತ ನೀಡಿದ ಮಹನೀಯರಲ್ಲಿ ಒಬ್ಬರಾದ ನಾಡಪ್ರಭು ಕೆಂಪೇಗೌಡ ಅವರ ಆಡಳಿತ ಎಂದಿಗೂ ಮಾದರಿಯಾಗಿದೆ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.
ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯತ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಅವರ ೫೧೫ ನೇ ಜಯಂತೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ೫೧೫ ವರ್ಷಗಳ ನಂತರವೂ ಕೆಂಪೇಗೌಡ ಅವರ ಸ್ಮರಣೆ ಮಾಡುವದಕ್ಕೆ ಅವರು ಮಾಡಿರುವ ಸ್ಮರಣೀಯ ಕಾರ್ಯಗಳಿಂದ ಎಂಬುವದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು. ಸಮಾಜಕ್ಕಾಗಿ ಕೆಲಸ ಮಾಡಿದವರನ್ನು ಮಾತ್ರ ಸಮಾಜ ಸದಾ ನೆನಪಿನಲ್ಲಿ ಇಟ್ಟುಕೊಳ್ಳುತ್ತದೆ. ಕೆಂಪೇಗೌಡ ಅವರು ಬೆಂಗಳೂರಿನಲ್ಲಿ ಒಂದು ಸಾವಿರ ಕೆರೆಗಳನ್ನು ನಿರ್ಮಾಣ ಮಾಡಿದ್ದರೂ ಕೆರೆಗಳು ಬಹಳಷ್ಟು ಅತಿಕ್ರಮಣವಾಗಿ ಕಾರಣದಿಂದಾಗಿ ಇಂದು ಕೇವಲ ೩೭ ಕೆರೆಗಳು ಮಾತ್ರ ಉಳಿದುಕೊಂಡಿವೆ. ನಾಡಪ್ರಭು ಕೆಂಪೇಗೌಡ ಅವರು ಬೆಂಗಳೂರು ನಗರದ ನಿರ್ಮಾತೃವಾಗಿದ್ದಾರೆ. ಇವರ ಆಡಳಿತ ಆದರ್ಶಪ್ರಾಯವಾಗಿದೆ. ವಿದ್ಯಾರ್ಥಿಗಳು ನಾಡಪ್ರಭುವಿನ ಜನಪರ ಆಡಳಿತವನ್ನು ಅರಿತುಕೊಳ್ಳಬೇಕೆಂದರು.
ತಾಲೂಕಿನಲ್ಲಿರುವ ೪೬ ಪ್ರೌಢಶಾಲೆಗಳಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳ ಮೂಲಕ ಕೆಂಪೇಗೌಡ ಅವರ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳುವ ಸೂಚನೆ ನೀಡಲಾಗಿತ್ತು. ಅದರಂತೆ ಎಲ್ಲ ಶಾಲೆಗಳಲ್ಲಿ ಕೆಂಪೇಗೌಡರ ಕುರಿತು ಭಾಷಣ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಈ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಇಂದು ಬಹುಮಾನ ವಿತರಣೆ ಮಾಡಲಾಗುತ್ತಿದೆ ಎಂದರು.
ತಾಲೂಕು ಪಂಚಾಯಿತಿ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ ಮಾತನಾಡಿ, ಕೆಂಪೇಗೌಡ ಅವರು ಒಳ್ಳೆಯ ಸೈನಿಕನಾಗುವ ಜೊತೆಗೆ ಒಳ್ಳೆಯ ಆಡಳಿತ ನೀಡುವ ಜೊತೆಗೆ ಬೆಂಗಳೂರಿನಲ್ಲಿ ವಿವಿಧೆಡೆ ಕೆರೆಗಳನ್ನು ನಿರ್ಮಾಣ ಮಾಡುವ ಮೂಲಕ ಜನರಿಗೆ ನೀರಿನ ಸಂಪನ್ಮೂಲ ಹೆಚ್ಚಳ ಮಾಡಿದ್ದರು. ಇಂದಿಗೂ ಬೆಂಗಳೂರಿನಲ್ಲಿ ಅವರು ನಿರ್ಮಿಸಿದ ಅನೇಕ ಕೆರೆಗಳನ್ನು ಕಾಣಬಹುದಾಗಿದೆ. ಇಂದು ಸಾಮಾಜಿಕ ಮಾಧ್ಯಮ ಬಹಳಷ್ಟು ವೇಗವಾಗಿದೆ. ವಿದ್ಯಾರ್ಥಿಗಳು ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕೆಂಬುದರ ಬಗ್ಗೆ ಬಹಳ ಜಾಗರೂಕತೆರಾಗಬೇಕಿದೆ. ವಿದ್ಯಾರ್ಥಿಗಳು ಉತ್ತಮ ಮಾಧ್ಯಮವನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಂಡು ನಾಡಿಗೆ ಉತ್ತಮ ಸೇವೆ ನೀಡುವಂತಾಗಬೇಕೆಂದರು.
ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಅವರು ನಾಡಪ್ರಭು ಕೆಂಪೇಗೌಡ ಕುರಿತು ಮಾತನಾಡಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಧ್ಯಾಪಕಿ ವಿಜಯಲಕ್ಷ್ಮೀ ಅವರು ಉಪನ್ಯಾಸ ನೀಡಿ ನಾಡಪ್ರಭು ಕೆಂಪೇಗೌಡ ಅವರ ಜೀವನ ಗಾಥೆಯ ಕುರಿತು ವಿದ್ಯಾರ್ಥಿಗಳಿಗೆ ಮಾರ್ಮಿಕವಾಗಿ ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ನಾಡಪ್ರಭು ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ತಾಲೂಕಿನಲ್ಲಿರುವ ಎಲ್ಲ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಕೆಂಪೇಗೌಡ ಅವರು ಕುರಿತು ಹಮ್ಮಿಕೊಂಡಿದ್ದ ಭಾಷಣ ಸ್ಪರ್ಧೆಯಲ್ಲಿ ಶಾಲಾ ಹಂತದಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪುಸ್ತಕ, ಪ್ರಶಸ್ತಿ ನೀಡಲಾಯಿತು. ಕ್ಷೇತ್ರಸಮನ್ವಾಧಿಕಾರಿ ಪಿ.ಯು.ರಾಠೋಡ ಸ್ವಾಗತಿಸಿದರು. ಎಂ.ವ್ಹಿ.ಗಬ್ಬೂರ ನಿರೂಪಿಸಿದರು. ಶಿವಾನಂದ ಮಂಗಾನವರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶ್ರೀ ಅರವಿಂದರು: ಆಧ್ಯಾತ್ಮಿಕ ಸಾಧನೆ ಮತ್ತು ಪೂರ್ಣಯೋಗ

ದಿಟ್ಟ ಗಣಾಚಾರಿ ಶರಣೆ ಗೊಗ್ಗವ್ವೆ

ನಾನು ಸಹ ಮುಖವಾಡ ಧರಿಸಲೇಬೇಕಾಯಿತು

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶ್ರೀ ಅರವಿಂದರು: ಆಧ್ಯಾತ್ಮಿಕ ಸಾಧನೆ ಮತ್ತು ಪೂರ್ಣಯೋಗ
    In ವಿಶೇಷ ಲೇಖನ
  • ದಿಟ್ಟ ಗಣಾಚಾರಿ ಶರಣೆ ಗೊಗ್ಗವ್ವೆ
    In ವಿಶೇಷ ಲೇಖನ
  • ನಾನು ಸಹ ಮುಖವಾಡ ಧರಿಸಲೇಬೇಕಾಯಿತು
    In ಭಾವರಶ್ಮಿ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 09, 2026
    In ದಿನಪತ್ರಿಕೆ
  • ಪವರ್ ಗ್ರೀಡ್ ಸಂಸ್ಥೆಯಿಂದ ದೇಶಕ್ಕೆ ಅಪಾರ ಕೊಡುಗೆ
    In (ರಾಜ್ಯ ) ಜಿಲ್ಲೆ
  • ಇಂದು ಕನ್ನೂರ ಸವಾಯಿ ವಸ್ತಿಯಲ್ಲಿ ಶಾಹನೂರವಲಿ ದಗಾ೯ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಚಕ್ಕೋಡನಹಳ್ಳಿ ಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಜನಗಣತಿ ಮೇಲ್ವಿಚಾರಕರರಿಗೆ & ಗಣತಿದಾರರಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಚಿನ್ನರ ಉತ್ಸವ: ಆದರ್ಶ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಧಾನ
    In (ರಾಜ್ಯ ) ಜಿಲ್ಲೆ
  • ಬಿ.ಎಲ್ಡಿಇ ಶಿಕ್ಷಣ ಮಹಾವಿದ್ಯಾಲಯಕ್ಕೆ (ಬಿ.ಇಡಿ) ಮೂರು ರ್‍ಯಾಂಕ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.