ಜಿಲ್ಲಾಧಿಕಾರಿಗಳಿಂದ ಇಂದಿರಾ ಕ್ಯಾಂಟಿನ್-ಡಿಜಿಟಲ್ ಗ್ರಂಥಾಲಯ ನಿರ್ಮಾಣದ ಸ್ಥಳ ಪರಿಶೀಲನೆ
ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬಬಲೇಶ್ವರ ತಾಲೂಕಿನ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ, ತಾಲೂಕಾ ಆಡಳಿತ ಸೌಧದಲ್ಲಿ ಸಾರ್ವಜನಿಕರ ಕುಂದು-ಕೊರತೆಗಳ ವಿಚಾರಣೆ ನಡೆಸಿದರು.
ಗುರುವಾರ ಬಬಲೇಶ್ವರ ತಾಲೂಕಿಗೆ ಭೇಟಿ ನೀಡಿದ ಅವರು, ಬಬಲೇಶ್ವರ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣಕ್ಕೆ ಸ್ಥಳ ಆಯ್ಕೆ ಹಾಗೂ ಡಿಜಿಟಲ್ ಗ್ರಂಥಾಲಯ ಕಟ್ಟಡ ನಿರ್ಮಾಣ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು.
ನಂತರ ತಾಲೂಕಾ ಆಡಳಿತ ಸೌಧಕ್ಕೆ ಭೇಟಿ ನೀಡಿ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳ ಕಾರ್ಯವೈಖರಿ ಕುರಿತು ಪರಿಶೀಲನೆ ನಡೆಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಸಾರ್ವಜನಿಕರಿಮದ ಯಾವುದೇ ಸಮಸ್ಯೆ ಬಾರದಂತೆ ನೋಡಿಕೊಂಡು ಜನರ ಕಚೇರಿಗಳಿಗೆ ಅಲೆದಾಟ ತಪ್ಪಿಸಿ ತ್ವರಿತವಾಗಿ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕ್ರಮ ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ಚುರುಕಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬಬಲೇಶ್ವರ ತಾಲೂಕಿನ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

