Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ
(ರಾಜ್ಯ ) ಜಿಲ್ಲೆ

ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಬಲೇಶ್ವರ ತಾಲೂಕಿನ ವಿವಿಧ ಕಚೇರಿಗಳಿಗೆ ಭೇಟಿ ನೀಡಿದ ಡಿಸಿ ಟಿ.ಭೂಬಾಲನ್ ಖಡಕ್ ಸೂಚನೆ

ವಿಜಯಪುರ: ಬಬಲೇಶ್ವರ ನಾಡಕಚೇರಿ, ರೈತ ಸಂಪರ್ಕ ಕೇಂದ್ರ, ಮೀಸಲು ಅರಣ್ಯ ಪ್ರದೇಶ, ಮಮದಾಪುರ ಕೆರೆಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಮರ್ಪಕವಾಗಿ ಕಾರ್ಯನಿರ್ವಹಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗುರುವಾರ ಬಬಲೇಶ್ವರ ತಾಲೂಕಿನ ಮಮದಾಪುರ ನಾಡಕಚೇರಿಗೆ ಭೇಟಿ ನೀಡಿದ ಅವರು, ಕಂದಾಯ ಇಲಾಖೆಯ ವಿವಿಧ ಕಾರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಕಚೇರಿಗಳಲ್ಲಿರುವ ಕಡತಗಳನ್ನು ಪರಿಶೀಲನೆ ನಡೆಸಿ, ಸಾರ್ವಜನಿಕರ ಯಾವುದೇ ಕಾರ್ಯಗಳಿಗೆ ವಿಳಂಬ ಧೋರಣೆ ಅನುಸರಿಸದೇ ನಿಗದಿತ ಕಾಲಾವಧಿಯಲ್ಲಿ ಇತ್ಯರ್ಥಗೊಳಿಸುವಂತೆ ತಿಳಿಸಿದ ಅವರು, ಕಚೇರಿ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುವುದೊಂದಿಗೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವ ಮೂಲಕ ಅವರ ಸಮಸ್ಯೆಗಳನ್ನು ತ್ವರಿತವಾಗಿ ಸ್ಪಂದಿಸಿ ಪರಿಹರಿಸಲು ಪ್ರಯತ್ನಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಂತರ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ರೈತರಿಂದ ಯಾವುದೇ ದೂರು ಬರದಂತೆ ನೋಡಿಕೊಳ್ಳಬೇಕು. ಬೀಜ, ರಸಗೊಬ್ಬರ ವಿತರಣೆ ಸಮರ್ಪಕವಾಗಿ ಮಾಡಬೇಕು. ಬೀಜ-ರಸಗೊಬ್ಬರ ವಿತರಣೆಯಲ್ಲಿ ಯಾವುದೇ ಗೊಂದಲವಾಗದಂತೆ ಎಚ್ಚರಿಕೆ ವಹಿಸುವಂತೆ ಅವರು ಸೂಚನೆ ನೀಡಿದರು.
ಮಮದಾಪುರದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಐತಿಹಾಸಿಕ ದೊಡ್ಡಕೆರೆ ಮತ್ತು ಸಣ್ಣಕೆರೆಯನ್ನು ವೀಕ್ಷಿಸಿದ ಅವರು ಭೂಸ್ವಾಧೀನ ವಿಚಾರ ಕುರಿತು ಪರಿಶೀಲನೆ ನಡೆಸಿದ ಅವರು, ಕೆರೆಯ ಪುನಶ್ಚೇತನ ಕುರಿತು ಅವಶ್ಯಕ ಕಾಮಗಾರಿಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಮಮದಾಪುರ ಮೀಸಲು ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಕೈಗೊಂಡ ಕೂಡಗಿ ಎನ್‌ಟಿಪಿಸಿ ಮತ್ತು ಅರಣ್ಯ ಇಲಾಖೆ ಸಹಬಾಗಿತ್ವದಲ್ಲಿ ಈ ವರ್ಷ ೭೫ ಹೆಕ್ಟರ್ ಪ್ರದೇಶದಲ್ಲಿ ನೆಡುತೋಪು ನಿರ್ಮಾಣದ ಕಾಮಗಾರಿಯನ್ನು ಪರಿಶೀಲನೆ ನಡೆಸಿ, ನಂತರ ಕಳೆದ ೨ ವರ್ಷಗಳಲ್ಲಿ ಕಾಖಂಡಕಿ ಮತ್ತು ಮಾಮಾದಾಪುರ ಅರಣ್ಯ ಪ್ರದೇಶದಲ್ಲಿ ನಿರ್ಮಾಣ ಮಾಡಿರುವ ನೆಡುತೋಪನ್ನುವನ್ನು ವೀಕ್ಷಿಸಿದರು. ಎನ್‌ಟಿಪಿಸಿ ಸಹಭಾಗಿತ್ವದೊಂದಿಗೆ ಅರಣ್ಯ ಇಲಾಖೆಯಿಂದ ಕೈಗೊಂಡ ಕಾಮಗಾರಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ರಕ್ಷಣೆ, ಪೋಷಣೆ ವ್ಯವಸ್ಥಿತ ನಿರ್ವಹಣೆಗೆ ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಮಮದಾಪುರ ಅರಣ್ಯದ ಸುಮಾರು ೨೦೦ ಹೆಕ್ಟರ್ ಪ್ರದೇಶದಲ್ಲಿ ಈಗಾಗಲೇ ೧ ಲಕ್ಷಕ್ಕಿಂತ ಅಧಿಕ ಸಸಿಗಳನ್ನು ನೆಟ್ಟು ನೆಡುತೋಪುಗಳನ್ನು ನಿರ್ಮಾಣ ಮಾಡಿ ಶೂನ್ಯ ದಿಂದ ಹಸಿರುಮಯದ ಕಡೆಗೆ ಉತ್ತಮ ಪರಿಸರವನ್ನು ನಿರ್ಮಾಣ ಮಾಡಿ ಭವಿಷ್ಯದ ದಿನಗಳಲ್ಲಿ ಇದೊಂದು ಉತ್ತಮ ಅರಣ್ಯ ಹಾಗೂ ಮಾದರಿ ಜೀವವೈವಿದ್ಯತೆ ನಿರ್ಮಾಣಕ್ಕೆ ಸಲಹೆ ನೀಡಿದ ಅವರು, ಕೆರೆಯ ಆಸುಪಾಸಿನ ಉಳಿದ ಜಾಗದಲ್ಲೂ ನೆಡುತೋಪು ನಿರ್ಮಾಣಕ್ಕೆ ಸಲಹೆ ನೀಡಿ, ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ ಕೊಡುವುದಾಗಿಯೂ ಈ ಸಂದರ್ಭದಲ್ಲಿ ಹೇಳಿದರು. ಅರಣ್ಯ ಇಲಾಖೆ ವತಿಯಿಂದ ಹಮ್ಮಿಕೊಂಡ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ವಲಯದ ವಲಯ ಅರಣ್ಯಾಧಿಕಾರಿ ಸಂತೋಷ ಆಜೂರ್, ಉಪವಲಯ ಅರಣ್ಯಾಧಿಕಾರಿಗಳಾದ ಅಪ್ಪಾಸಾಹೇಬ ಬಗಲಿ, ಸಿ ಎಮ್ ಪಟ್ಟಣಶೆಟ್ಟಿ ಮತ್ತು ಗಸ್ತು ಅರಣ್ಯ ಪಾಲಕರಾದ ಶ್ರೀಧರ ಪತ್ತಾರ, ಗುರಪ್ಪ ಬಾಗೇವಾಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.