ಮುದ್ದೇಬಿಹಾಳ: ಪಟ್ಟಣದ ಎಂಜಿವ್ಹಿಸಿ ಕಾಲೇಜಿನಲ್ಲಿ ಜೂ.೨೮ ರಂದು ಬೆಳಿಗ್ಗೆ ೧೦:೩೦ ಗಂಟೆಗೆ “ಜಾನಪದ ಪರಂಪರೆ ಮತ್ತು ಪ್ರಯೋಗ ತಾತ್ವಿಕ ಚಿಂತನೆ ” ಈ ವಿಷಯದ ಕುರಿತು ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಾತಾ ಜೋಗತಿ ಮಂಜಮ್ಮನವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಅಶೋಕ ತಡಸದ ವಹಿಸಲಿದ್ದಾರೆ. ಬೆಳಗಾವಿಯ ಆರ್‌ಪಿಡಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎನ್.ಬಿ.ಕೋಲ್ಕಾರ ಆಶಯ ನುಡಿಗಳನ್ನಾಡಲಿದ್ದಾರೆ. ಸಂಶೋಧಕರಾದ ಡಾ.ವಾಯ್ ವಾಯ ಕೊಕ್ಕನವರ, ಡಾ. ವೀರೇಶ್ ಹಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸುತ್ತಿದ್ದು ಹಲವು ಪ್ರಾಧ್ಯಾಪಕರು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಪ್ರಬಂಧ ಮಂಡಿಸಲಿದ್ದಾರೆ. ಕಾರ್ಯಕ್ರಮದ ಹಾಗೂ ಗೋಷ್ಠಿಯ ಅಧ್ಯಕ್ಷತೆಯನ್ನು ಎ.ಆರ್.ಮುಲ್ಲಾ ವಹಿಸಲಿದ್ದು ಕಾಲೇಜಿನ ಪ್ರಾಚಾರ್ಯ ಪ್ರೊ.ಎಸ್.ಎನ್.ಪೋಲೇಶಿ ಹಾಗೂ ಸಂಕಿರಣದ ಸಂಯೋಜಕ ಡಾ. ಪ್ರಕಾಶ ನರಗುಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
