Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭ್ರೂಣ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮ :ದಿನೇಶ ಗುಂಡೂರಾವ್
(ರಾಜ್ಯ ) ಜಿಲ್ಲೆ

ಭ್ರೂಣ ಹತ್ಯೆ ತಡೆಗೆ ಕಟ್ಟುನಿಟ್ಟಿನ ಕ್ರಮ :ದಿನೇಶ ಗುಂಡೂರಾವ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆರೋಗ್ಯ ಇಲಾಖೆ ಪ್ರಗತಿ ಪರಿಶೀಲಿಸಿದ ಆರೋಗ್ಯ ಸಚಿವರು | ತಜ್ಞ ವೈದ್ಯರ ನೇಮಕಾತಿಗೆ ಅನುಮತಿ | ಅಧಿಕಾರಿಗಳಿಗೆ ಖಡಕ್ ಸೂಚನೆ

ವಿಜಯಪುರ: ಜಿಲ್ಲೆಯಲ್ಲಿನ ವೈದ್ಯರ ಕೊರತೆ ನೀಗಿಸುವ ನಿಟ್ಟಿನಲ್ಲಿ ಗುತ್ತಿಗೆ ಆಧಾರದ ಮೇಲೆ ತಜ್ಞರ ವೈದ್ಯರ ನೇಮಕಾತಿಗಾಗಿ ಅನುಮತಿ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ ಆರ್.ಗುಂಡೂರಾವ್ ಅವರು ಹೇಳಿದರು.
ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಮೆಡಿಕಲ್ ಕಾಲೇಜುಗಳೊಂದಿಗೆ ಸಮನ್ವಯತೆ ಸಾಧಿಸಿಕೊಂಡು, ಅವರೊಂದಿಗೆ ಸಂಯೋಜನೆ ಮಾಡಿ, ವೈದ್ಯರ ಹಾಗೂ ಇತರ ಸಿಬ್ಬಂದಿಗಳ ಕೊರತೆ ನೀಗಿಸಲು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ತಾಯಿ ಮತ್ತು ಶಿಶುವಿನ ಮರಣ ಪ್ರಮಾಣವನ್ನು ತಗ್ಗಿಸಲು ಅಗತ್ಯ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಭ್ರೂಣ ಹತ್ಯೆ ತಡೆಗೆ ಸೂಕ್ತ ಜಾಗೃತಿ ಹಾಗೂ ತಿಳುವಳಿಕೆ ಮೂಡಿಸಬೇಕು. ಭ್ರೂಣ ಹತ್ಯೆ ತಡೆಗೆ ತಳಮಟ್ಟದಿಂದ ಯೋಜನೆ ರೂಪಿಸಿ, ಭ್ರೂಣ ಹತ್ಯೆಯ ಮಾಹಿತಿ ನೀಡುವವರಿಗೆ ಬಹುಮಾನವನ್ನು ಘೋಷಿಸುವ ಮೂಲಕ ಮಾಹಿತಿ ಪಡೆದುಕೊಂಡು ಮುಂಜಾಗ್ರತೆ ಕ್ರಮ ಕೈಗೊಂಡು ಭ್ರೂಣ ಹತ್ಯೆ ತಡೆಯಲು ಕ್ರಮ ವಹಿಸುವಂತೆ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮಳೆಗಾಲ ಆರಂಭವಾಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಸಮುದಾಯದ ಸಹಭಾಗಿತ್ವದಲ್ಲಿ ನೀರು ಪರಿಕರಗಳನ್ನು ಸ್ವಚ್ಛಗೊಳಿಸುವ ಕಾರ್ಯ ಹಮ್ಮಿಕೊಂಡು ಡೆಂಗ್ಯೂ ಹರಡದಂತೆ ಕ್ರಮ ವಹಿಸಬೇಕು. ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸಬೇಕು ಎಂದು ಹೇಳಿದರು.
ಸಾರ್ವಜನಿಕರಿಗೆ ಆರೋಗ್ಯ ಸಲಹೆಗಳನ್ನು ಕಾಲಕಾಲಕ್ಕೆ ನೀಡಬೇಕು. ತೀವ್ರ ರಕ್ತ ಹೀನತೆಯಿಂದ ಬಳಲುತ್ತಿರುವ ಗರ್ಭಿಣಿಯರಿಗೆ ಐರನ್ ಮಾತ್ರೆಗಳನ್ನು ಸಮಯಕ್ಕೆ ಸರಿಯಾಗಿ ಬಳಸುವಂತೆ ತಿಳುವಳಿಕೆ ನೀಡಬೇಕು. ಪ್ರತಿ ಗ್ರಾಮ ಮಟ್ಟದಲ್ಲಿ ಈ ಕಾರ್ಯಕ್ಕೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಬಳಸಿಕೊಂಡು ತೀವ್ರ ಜಾಗೃತಿ ಮೂಡಿಸಬೇಕು. ಅಂಗನವಾಡಿಗಳಲ್ಲಿನ ಮಕ್ಕಳ ಆರೋಗ್ಯ ತಪಾಸಣೆಗೆ ತೀವ್ರ ನಿಗಾ ವಹಿಸಬೇಕು. ಮಕ್ಕಳಿಗೆ ಹೆಚ್ಚು ಪೌಷ್ಟಿಕ ಆಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ನಾಗಠಾಣ ಶಾಸಕರಾದ ವಿಠ್ಠಲ ಕಟಕದೊಂಡ, ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷೆ ಶ್ರೀಮತಿ ಕಾಂತಾ ನಾಯಕ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್, ಅಭಿಯಾನ ನಿರ್ದೇಶಕ ನವೀನ್ ಭಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಶ್ರೀನಿವಾಸ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಬಸವರಾಜ ಹುಬ್ಬಳ್ಳಿ, ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ ಸೇರಿದಂತೆ ಆರೋಗ್ಯ ಇಲಾಖೆ ತಾಲೂಕಾ ವೈದ್ಯಾಧಿಕಾರಿಗಳು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಡೆಂಗ್ಯೂ ಕುರಿತು ಅರಿವು ಮೂಡಿಸಿ

ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿ ಗ್ರಾಮಗಳಲ್ಲಿ ಆರೋಗ್ಯ ಶಿಬಿರಗಳನ್ನು ಏರ್ಪಡಿಸಬೇಕು. ರಾಜ್ಯದಲ್ಲಿ ಡೆಂಗಿ ಜ್ವರ ಹೆಚ್ಚುತ್ತಿರುವ ಕಾರಣ ಮುಂಜಾಗೃತೆ ಕ್ರಮ ವಹಿಸಿಬೇಕು. ಪ್ರತಿ ಗ್ರಾಮಗಳಲ್ಲಿ ಆಶಾ ಕಾರ್ಯಕರ್ತರು ಮನೆ ಮನೆ ತೆರಳಿ ಡೆಂಗ್ಯೂ ಕುರಿತು ಹಾಗೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವಂತೆ ತಿಳಿಸಿದ ಅವರು, ರಕ್ತದೊತ್ತಡ ಹಾಗೂ ಮದುಮೇಹಗಳಂತಹ ರೋಗಗಳನ್ನು ತಡೆಗಟ್ಟಲು ಯೋಗ ಅಭ್ಯಾಸ ಮಾಡುವಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕು ಈ ಕುರಿತು ಆಯುಷ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಯೋಗ ಮಾಡುವಂತೆ ಸಾರ್ವಜನಿಕರಿಗೆ ಪ್ರೇರೇಪಿಸಬೇಕು. ಇ-ಸಂಜೀವಿನಿ ಕುರಿತು ವ್ಯಾಪಕವಾಗಿ ಮಾಹಿತಿ ಒದಗಿಸುವಂತೆ ಸಚಿವ ದಿನೇಶ ಗುಂಡೂರಾವ್ ಸೂಚನೆ ನೀಡಿದರು.

ಆಸ್ಪತ್ರೆಗಳಲ್ಲಿ ರೇಟ್ ಬೋರ್ಡ್ ಪ್ರದರ್ಶನ ಕಡ್ಡಾಯ

ಜಿಲ್ಲೆಯಲ್ಲಿನ ಆರೋಗ್ಯ ಇಲಾಖೆ ಸಿಬ್ಬಂದಿ ನಿಗದಿತ ಅವಧಿಗೆ ಕರ್ತವ್ಯಕ್ಕೆ ಹಾಜರಾಗಬೇಕು. ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ-ಸಿಬ್ಬಂದಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ವಹಿಸಲಾಗುವುದು. ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ರೇಟ್ ಬೋರ್ಡ್ ಪ್ರದರ್ಶನ ಮಾಡಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಮುತುವರ್ಜಿ ವಹಿಸಿ ಹೆಚ್ಚಿನ ನಿಗಾ ವಹಿಸುವಂತೆ ಸಚಿವ ದಿನೇಶ ಗುಂಡೂರಾವ್ ಸೂಚಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ

ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ

ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುಪಿಎಸ್‌ಸಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೧೪.೮೩ ಲಕ್ಷ ನಮೂನೆಗಳ ಡಿಜಿಟಲೀಕರಣ ಪೂರ್ಣ
    In (ರಾಜ್ಯ ) ಜಿಲ್ಲೆ
  • ಜು.೨೬ ರಂದು ಸಣ್ಣ ಮತ್ತು ಜಿಲ್ಲಾ ಪತ್ರಿಕೆಗಳ ಸಂಘದ ಪದಗ್ರಹಣ
    In (ರಾಜ್ಯ ) ಜಿಲ್ಲೆ
  • ಬೋರ್‌ವೆಲ್ ಕೊರೆಸುವ ಮೂಲಕ ನೀರಿನ ಸಮಸ್ಯೆಗೆ ಪರಿಹಾರ
    In (ರಾಜ್ಯ ) ಜಿಲ್ಲೆ
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಆಧಾರ್ ಸೇವೆ ಸ್ಥಗಿತ: ಸಾರ್ವಜನಿಕರ ಪರದಾಟ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.