ಕೆಂಭಾವಿ: ಪಟ್ಟಣವು ಸೇರಿದಂತೆ ವಲಯದಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಓದುತ್ತಿರುವ ಮಕ್ಕಳ ದಾಖಲಾತಿ ಸಮಗ್ರ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಗೋಪಾಲ ಕಟ್ಟಿಮನಿ ಒತ್ತಾಯಿಸಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಮಕ್ಕಳ ಅಧಿಕೃತ ದಾಖಲಾತಿ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಇದ್ದು ಅಂತಹ ಮಕ್ಕಳೇ ಖಾಸಗಿ ಶಾಲೆಗಳಿಗೆ ಓದಲು ತೆರಳುತ್ತಿರುವ ಸನ್ನಿವೇಶ ಕಂಡು ಬರುತ್ತಿದೆ. ಇದಕ್ಕೆ ನೇರ ಹೊಣೆ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು, ಏಕೆಂದರೆ ಮಕ್ಕಳ ದಾಖಲಾತಿ ತೋರಿಸಿ ಬಿಸಿಯೂಟಕ್ಕೆ ಬೇಕಾದ ಸಾಮಗ್ರಿಗಳ ಖರೀದಿ ಮಾಡುತ್ತಾರೆ. ಇಲ್ಲಿ ಸಾಕಷ್ಟು ಲೋಪ ದೋಷಗಳು ಕಂಡರು ಕಣ್ಮುಚ್ಚಿ ಕುಳಿತ ಇಲಾಖೆ. ಹಣ ಗಳಿಸಲು ಮುಂದಾದ ಖಾಸಗಿ ಶಿಕ್ಷಣ ಸಂಸ್ಥೆಗಳು ಅಂತಹ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳುತ್ತಿವೆ. ಇದು ಮಕ್ಕಳು ಕಲಿಕೆಯ ಮೇಲೆ ದುಷ್ಪರಿಣಾಮ ಬೀರಲಿದೆ. ಕಾರಣ ಇದರ ಸಮಗ್ರ ತನಿಖೆ ನಡೆಸಿ ಇದಕ್ಕೆ ಸಹಕಾರ ನೀಡುತ್ತಿರುವ ಶಾಲಾ ಶಿಕ್ಷಕರು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
Subscribe to Updates
Get the latest creative news from FooBar about art, design and business.
ಮಕ್ಕಳ ದಾಖಲಾತಿ ತೋರಿಸಿ ಬಿಸಿಯೂಟ ದುರುಪಯೋಗ :ಕ್ರಮಕ್ಕೆ ಆಗ್ರಹ
Related Posts
Add A Comment

