Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ಕನ್ನಡ ಭಾಷೆ ಮತ್ತು ಸಾಮಾಜಿಕ ಜಾಲತಾಣಗಳು
ವಿಶೇಷ ಲೇಖನ

ಕನ್ನಡ ಭಾಷೆ ಮತ್ತು ಸಾಮಾಜಿಕ ಜಾಲತಾಣಗಳು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

“ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ”- ವಿವೇಕಾನಂದ. ಎಚ್. ಕೆ. ಬೆಂಗಳೂರು

ಸಾಮಾಜಿಕ ಜಾಲತಾಣಗಳು ಕನ್ನಡ ಭಾಷೆ ಮತ್ತು ಸಾಹಿತ್ಯದ ಮೇಲೆ ಬೀರಿದ ಪ್ರಭಾವ..
ಸುಮಾರು 10/15 ವರ್ಷಗಳ ಹಿಂದೆ ಇದ್ದ ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗೆಗಿನ ಆತಂಕ ಈಗ ಅಷ್ಟಾಗಿ ಕಾಣುತ್ತಿಲ್ಲ. ಫೇಸ್ ಬುಕ್, ವಾಟ್ಸ್ ಆಪ್, ಎಕ್ಸ್, ಇನ್ಸ್ಟಾಗ್ರಾಂ ಮುಂತಾದ ಜಾಲತಾಣಗಳ ಸಂಪರ್ಕ ಕ್ರಾಂತಿಯಿಂದ ಆದ ಕೆಲವು ಒಳ್ಳೆಯ ಬೆಳವಣಿಗೆಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಬಹಳ ಉಪಯೋಗವಾಗಿದೆ ಎಂಬುದನ್ನು ಗಮನಿಸಬಹುದು.
ಮೊದಲೆಲ್ಲಾ ಕೇವಲ ಪತ್ರಿಕೆಗಳು, ನಿಯತಕಾಲಿಕೆಗಳು, ಒಂದಷ್ಟು ಸಾಂಸ್ಕೃತಿಕ ವೇದಿಕೆಗಳು, ಪ್ರಕಾಶನಗಳು ಮತ್ತು ಬೆರಳೆಣಿಕೆಯ ಬರಹಗಾರರು ಬಿಟ್ಟರೆ ಸಾಮಾನ್ಯರಿಂದ ಸಾಹಿತ್ಯ ದೂರವೇ ಇತ್ತು. ಸಿನಿಮಾ ಜನಪ್ರಿಯತೆಗೆ ಹೋಲಿಸಿದರೆ ಸಾಹಿತ್ಯ ಕೆಲವೇ ಜನರ ಆಸಕ್ತಿದಾಯಕ ಕ್ಷೇತ್ರವಾಗಿತ್ತು. ಆದರೆ ಈಗ ನೋಡಿ ಸಾಮಾನ್ಯ ಜನರೂ ತಮ್ಮ ಭಾವನೆ ಅಭಿಪ್ರಾಯಗಳನ್ನು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಅದೂ ಕನ್ನಡದಲ್ಲಿಯೇ ವ್ಯಕ್ತಪಡಿಸುತ್ತಿದ್ದಾರೆ. ಕೆಲವು ಯುವ ಪ್ರತಿಭೆಗಳಂತೂ ಮೂಕವಿಸ್ಮಿತರಾಗುವಂತೆ ತಮ್ಮ ಬರಹಗಳನ್ನು ಮೂಡಿಸುತ್ತಿದ್ದಾರೆ. ಅವರ ಭಾಷೆ, ಕಲ್ಪನೆ, ನಿರೂಪಣೆ ಹಿಂದಿನ ಕನ್ನಡ ಸಾಹಿತ್ಯದ ಸ್ವರ್ಣಯುಗ ಮತ್ತೆ ಮರುಕಳಿಸುತ್ತಿದೆಯೇನೋ ಎಂಬ ಭಾವನೆ ಉಂಟುಮಾಡುತ್ತಿದೆ.


FACEBOOK /WATSAPP ಗ್ರೂಪ್ ಗಳ ಹೆಸರನ್ನೇ ಗಮನಿಸಿ, ಎಷ್ಟೊಂದು ಆಕರ್ಷಕ, ಎಷ್ಟೊಂದು ಸುಂದರ, ಎಷ್ಟೊಂದು ಮುದ್ದು,
ಎಲ್ಲೋ ಆಗಾಗ ಕೆಲವೇ ಸಾಹಿತ್ಯಾಸಕ್ತ ಗುಂಪುಗಳಲ್ಲಿ ನಡೆಯುತ್ತಿದ್ದ ಕವಿಗೋಷ್ಟಿ, ವಿಚಾರ ಸಂಕಿರಣ, ಸಾಹಿತ್ಯ ಸ್ಪರ್ಧೆ ಈಗ ರಾಜ್ಯಾದ್ಯಂತ ಆಗಾಗ ನಡೆಯುತ್ತಲೇ ಇದೆ. ತಮ್ಮದೇ ಗ್ರೂಪ್ ಗಳಲ್ಲಿ ಸಾಹಿತ್ಯದ ಬಗ್ಗೆ ನಿರಂತರ ಚರ್ಚೆಗಳಾಗುತ್ತಲೇ ಇದೆ. ಅದರಲ್ಲೂ ಶಾಲಾ ಶಿಕ್ಷಕ/ಶಿಕ್ಷಕಿಯರು, ಮಾಹಿತಿ ತಂತ್ರಜ್ಞಾನದ ಆಧುನಿಕ ಜೀವನ ಶೈಲಿಯ ಹುಡುಗ/ಹುಡುಗಿಯರು, ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು, ಇನ್ನೂ ಆಶ್ಚರ್ಯವೆಂದರೆ ಉರ್ದು ಮಾತೃಭಾಷೆಯ ಮುಸ್ಲಿಂಮರೂ ಕೂಡ ಕನ್ನಡದ ಅತ್ಯಂತ ಪ್ರತಿಭಾವಂತ ಬರಹಗಾರರಾಗಿ ಮೂಡಿಬರುತ್ತಿರುವುದು ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಹೆಮ್ಮೆಪಡುವ ಸಂಗತಿ.
ಇದೇನು ಕಡಿಮೆ ಸಾಧನೆಯಲ್ಲ. ಹಳೆಯ ತಲೆಮಾರಿನ ಕೆಲವು ಬರಹಗಾರರು ಒಂದಷ್ಟು ಅಸೂಯೆ ಪಡುವಷ್ಟು, ತಳಮಳಗೊಳ್ಳುವಷ್ಟು ಇದು ಬೆಳೆದಿದೆ. ಬದಲಾವಣೆಯ ಸಂದರ್ಭಗಳಲ್ಲಿ ಇದು ಸಹಜ ಇರಲಿ. ಅದೂ ಅಲ್ಲದೆ ಸಾಹಿತ್ಯ ಪ್ರಕಾರದ ಅತ್ಯಂತ ಕಠಿಣ ರೂಪವಾದ ವಿಮರ್ಶಾ ವಿಭಾಗದಲ್ಲಿಯೂ ಹೊಸ ರೀತಿಯ ಚಿಂತನಾ ನೋಟ ಕಾಣುತ್ತಿರುವುದು ತುಂಬಾ ಸಂತೋಷ ಉಂಟುಮಾಡುತ್ತಿದೆ .
ಎಂದಿನಂತೆ ಒಂದಷ್ಟು ಉಢಾಪೆ, ಜೊಳ್ಳು ಇದ್ದದ್ದೇ. ಅದು ಅನುಭವದೊಂದಿಗೆ ಪಕ್ವವಾಗುತ್ತಾ ಸಾಗುತ್ತದೆ ಎಂದು ನಿರೀಕ್ಷಿಸೋಣ.
ಕೊನೆಯದಾಗಿ ಒಂದು ಕಾಡುವ ಕೊರತೆಯೆಂದರೆ ಕನ್ನಡ ಶಾಲೆಗಳ ಅಧೋಗತಿ ಮತ್ತು ಅಲ್ಲಿ ಕಲಿಯುವವರ ಸಂಖ್ಯೆ ಗಾಬರಿಯಾಗುವಷ್ಟು ಕಡಿಮೆಯಾಗಿರುವುದು. ಅದು ದೀರ್ಘಾವಧಿಯಲ್ಲಿ ಖಂಡಿತ ಕೆಟ್ಟ ಪರಿಣಾಮ ಬೀರುತ್ತದೆ. ಇದು ಆಡಳಿತಾಗಾರರ – ವ್ಯವಸ್ಥೆಯ ಲೋಪ.
ಅದು ಬಿಟ್ಟರೆ ಕನ್ನಡ ಭಾಷೆ ಮತ್ತು ಸಾಹಿತ್ಯ ಅತ್ಯಂತ ಉಲ್ಲಾಸದಾಯಕವಾಗಿದೆ.
ಸಾಹಿತ್ಯ ಮತ್ತು ಭಾಷೆಯ ಮೇಲಿನ ಪ್ರಭಾವದ ಬಗ್ಗೆ ಮಾತ್ರ ಇಲ್ಲಿ ಹೇಳಲಾಗಿದೆ. ಇದಲ್ಲದೆ ಸಾಮಾಜಿಕ ಜಾಲತಾಣ ಇಡೀ ವ್ಯವಸ್ಥೆಯ ಮೇಲೆ ಬೀರಿರುವ ಪ್ರಭಾವ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಅದರಿಂದಾಗಿ ಆಗುತ್ತಿರುವ ಬದಲಾವಣೆಗಳನ್ನು ಕುರಿತು ಮುಂದೆ ಅಭಿಪ್ರಾಯ ವ್ಯಕ್ತಪಡಿಸುವೆ..

“ಪ್ರಬುಧ್ಧ ಮನಸ್ಸು ಪ್ರಬುಧ್ಧ ಸಮಾಜ”
– ವಿವೇಕಾನಂದ. ಎಚ್. ಕೆ. ಬೆಂಗಳೂರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.