ಮುದ್ದೇಬಿಹಾಳ: ಡೆಂಗಿ ಜ್ವರ ನಿಯಂತ್ರಣಗೊಳಿಸಲು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾದ ಪ್ರತೀ ಶುಕ್ರವಾರ ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಚಟುವಟಿಕೆಯನ್ನು ಪಟ್ಟಣದ ಪುರಸಭೆ ಎದುರು ಶುಕ್ರವಾರ ಪು.ಸದಸ್ಯೆ ಪ್ರೀತಿ ದೇಗಿನಾಳ ಚಾಲನೆ ನೀಡಿದರು.
ಈ ವೇಳೆ ನಗರ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ಈ ಸಮೀಕ್ಷೆ ನಡೆಸಲಾಗುತ್ತಿದೆ. ಡೆಂಘೀ ರೋಗವು ಈಡಿಸ್ ಎಂಬ ಸೊಳ್ಳೆಗಳಿಂದ ಹರಡುವ ರೋಗವಾಗಿದೆ. ಇಂಥ ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳಾದ ಹೂವಿನ ಕುಂಡ, ಬಿಸಾಕಿದ ಹಳೆ ಟೈರ್, ಹಳೆ ಎಣ್ಣೆಯ ಡ್ರಮ್, ನೀರು ಸಂಗ್ರಹಿಸುವ ತೊಟ್ಟ್ಟಿ ಮುಂತಾದವುಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವದು, ಮಳೆಗಾಲದಲ್ಲಿ ಸೋಂಕು ಹೆಚ್ಚಾಗಿ ಹರಡುವುದರಿಂದ ಇವುಗಳನ್ನು ಶುಚಿಗೊಳಿಸಿ ಸೊಳ್ಳೆ ಮೊಟ್ಟೆ ಇಡಲು ಅವಕಾಶವಿರದಂತೆ ಸಾರ್ವಜನಿಕರು ನೋಡಿಕೊಳ್ಳಬೇಕು. ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರ ವಹಿಸಬೇಕು. ನೀರು ಶೇಖರಣಾ ತೊಟ್ಟಿ ಮತ್ತು ಟ್ಯಾಂಕ್‌ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಬೇಕು. ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬಾರದು. ಮನೆಯ ಸುತ್ತ ಮತ್ತು ಮಾಳಿಗೆಯ ಮೇಲೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ತೆಂಗಿನ ಚಿಪ್ಪು, ಟೈರ್‌ನಂತಹ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ತೊಟ್ಟಿ, ಬಿಂದಿಗೆ, ಡ್ರಮ್ ಗಳಲ್ಲಿ ೨-೩ ದಿನಕ್ಕೊಮ್ಮೆ ನೀರು ಬದಲಿಸಿ ಸ್ವಚ್ಛಗೊಳಿಸಿಡುವದು ಸೊಳ್ಳೆ ನಿಯಂತ್ರಣಕ್ಕೆ ಇರುವ ಪರಿಹಾರಗಳಾಗಿವೆ ಎಂದರು.
ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಚಟುವಟಿಕೆ ಅಂಗವಾಗಿ ಪ್ರತಿಜ್ಞಾವಿಧಿಯನ್ನು ಆರೋಗ್ಯ ಶಿಕ್ಷಣಾಧಿಕಾರಿ ಅನುಸೂಯಾ ತೇರದಾಳ, ಬೋಧಿಸಿದರು. ಪುರಸಭೆಯ ಕಂದಾಯ ಅಧಿಕಾರಿ ಎನ್.ಎಸ್.ಪಾಟೀಲ್, ವ್ಹಿ.ಬಿ.ಡಿ ಮೇಲ್ವಿಚಾರಕ ಎಸ್.ಸಿ.ರುದ್ರವಾಡಿ, ಪುರಸಭೆ ಆರೋಗ್ಯ ನಿರೀಕ್ಷಣಾಧಿಕಾರಿ ಜಾವಿದ್ ನಾಯ್ಕೋಟಿ, ಆರೋಗ್ಯ ಇಲಾಖೆ, ಪುರಸಭೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

