ಸಿಂದಗಿ: ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಜಲ ಜೀವನ ಮಿಷನ್ ಯೋಜನೆ ಮೂಲಕ ಸಂಪರ್ಕ ಕಲ್ಪಿಸಲಾಗಿದೆ. ಅಧಿಕಾರಿಗಳು ನೀರು ಪೂರೈಕೆಯಲ್ಲಿ ಬದ್ಧತೆ ಕಾಯ್ದುಕೊಂಡು ಜನರಿಗೆ ಶುದ್ಧ ಹಾಗೂ ಸುರಕ್ಷಿತ ನೀರನ್ನು ಪೂರೈಕೆ ಮಾಡಬೇಕು ಎಂದು ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಅಭಿಯಂತರ ಹಾಗೂ ದೇವರ ಹಿಪ್ಪರಗಿ ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಭಾರತಿ ಚೆಲುವಯ್ಯ ಸೂಚಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾ ಪಂಚಾಯತ್ ಜಲಜೀವನ್ ಮಿಷನ್ ಯೋಜನೆಯ ಮಾಹಿತಿ ಅನುಷ್ಠಾನ ನೆರವು ಸಂಸ್ಥೆ ಸಂಯೋಗದಲ್ಲಿ ಪ್ರತಿಮನೆಗೆ ನಲ್ಲಿ ಸಂಪರ್ಕ ಮೂಲಕ ಶುದ್ಧ ಹಾಗೂ ಸುರಕ್ಷಿತ ನೀರು ಗ್ರಾಮಗಳಲ್ಲಿ ಪೂರೈಕೆ ಮಾಡುವ ಕುರಿತು ಶುಕ್ರವಾರ ನಡೆದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಜನರಿಗೆ ಜಲಜೀವನ್ ಮಿಷನ್ ಯೋಜನೆಯಡಿ ಪೂರೈಕೆ ಆಗುವ ನೀರನ್ನು ಬಹಳ ಸುರಕ್ಷತೆ ದೃಷ್ಟಿಯಿಂದ ಬಳಸಬೇಕು. ನೀರು ಸಂಗ್ರಹಿಸುವ ತೊಟ್ಟಿ ಹಾಗೂ ನೀರನ್ನು ಬಳಕೆ ಮಾಡುವ ವಸ್ತುಗಳನ್ನು ಶುಚಿಯಾಗಿಟ್ಟುಕೊಳ್ಳುವಂತೆ ಸಲಹೆ ನೀಡಿದರು.
ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿಗಳು ಮಾತನಾಡಿ, ಪ್ರಶಸ್ತ ಮಳೆಗಾಲ ಪ್ರಾರಂಭವಾಗಿದ್ದು. ನೀರಿನ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ಕಲುಷಿತ ನೀರು ಪೂರೈಕೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮಲೇರಿಯ, ಡೆಂಗು ಹಾಗೂ ಸಾಂಕ್ರಾಮಿಕ ರೋಗಗಳನ್ನು ಹತೋಟಿಗೆ ತರಲು ಶುದ್ಧ ಕುಡಿಯುವ ನೀರು ಸೇವನೆ ಮಾಡಬೇಕು. ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ಅವರು ತಿಳಿಸಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಿಂದಗಿ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ತಾರಾನಾಥ್ ಶಂಕರ್ ಮಾತನಾಡಿ, ಗ್ರಾಮೀಣ ಜನರಿಗೆ ಅನುಕೂಲವಾಗುವಂತೆ ಮನೆ ಮನೆಗೆ ನಲ್ಲಿ ಸಂಪರ್ಕವನ್ನು ಕಲ್ಪಿಸಲಿಕ್ಕೆ ಸಹಾಯಕವಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ IDR ಸಂಸ್ಥೆಯ ಸಿಬ್ಬಂದಿಯವರು ಕುಡಿಯುವ ನೀರಿನ ಬಳಕೆ ಮತ್ತು ಗುಣಮಟ್ಟದ ಕುರಿತು ಪ್ರಾತ್ಯಕ್ಷಿಕೆ ತೋರಿಸಿದರು.
ಐ ಆರ್ ಡಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಶಿವಾನಂದ ಬಡಿಗೇರ. ಶೇಖರ ಹರಿಜನ, ಬಸವರಾಜ್ ನಂಬರಗಿ, ಹಾಗೂ ಸಿಂದಗಿ, ದೇವರ ಹಿಪ್ಪರಗಿ, ಅಲಮೇಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.
Subscribe to Updates
Get the latest creative news from FooBar about art, design and business.
ನೀರು ಸಂಗ್ರಹಿಸುವ ತೊಟ್ಟಿ ಶುಚಿಯಾಗಿಟ್ಟುಕೊಳ್ಳಿ :ತಾಪಂ ಇಒ ಭಾರತಿ
Related Posts
Add A Comment

