ವಿಜಯಪುರ: ವಿಜಯಪುರದ ಸೋಲಾಪುರ ರಸ್ತೆಯಲ್ಲಿರುವ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಪ್ರವೇಶಕ್ಕಾಗಿ ಆಸಕ್ತ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ಅಭ್ಯರ್ಥಿಗಳು ಸಂಸ್ಥೆಗೆ ಭೇಟಿ ನೀಡಿ ಆಫ್‌ಲೈನ್ ಮೂಲಕ ಜುಲೈ೪ರಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪ್ರವೇಶವನ್ನು ಮಾರನೇಯ ದಿನ ಬೆಳಿಗ್ಗೆ ೧೦ ಗಂಟೆಗೆ ಮೆರಿಟ್ ಆಧಾರದಲ್ಲಿ ನೀಡಲಾಗುವುದು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಪ್ರಾಚಾರ್ಯರು, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಜಯಪುರ ಮೊ: ೯೯೭೨೬೮೨೧೮೪, ೯೪೪೮೯೮೬೩೮೧ & ೯೦೩೫೪೩೪೩೮೧ ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಉಳಿದ ಸ್ಥಾನಗಳ ಪ್ರವೇಶಕ್ಕೆ ಅವಕಾಶ
Related Posts
Add A Comment
