Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ

ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ

ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಾಲಮಂದಿರ & ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಡಿಸಿ ಟಿ.ಭೂಬಾಲನ್ ಭೇಟಿ
(ರಾಜ್ಯ ) ಜಿಲ್ಲೆ

ಬಾಲಮಂದಿರ & ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಡಿಸಿ ಟಿ.ಭೂಬಾಲನ್ ಭೇಟಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಗರದ ಟಕ್ಕೆಯಲ್ಲಿರುವ ಕಿರಿಯರ ಬಾಲಕರ ಸರಕಾರಿ ಬಾಲಮಂದಿರಕ್ಕೆ ಭಾನುವಾರ ಬೆಳಿಗ್ಗೆ ಡಿಸಿ ಟಿ.ಭೂಬಾಲನ್ ದಿಢೀರ ಭೇಟಿ ನೀಡಿ, ಬಾಲಮಂದಿರದ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.
ಬಾಲಮಂದಿರದ ಅಡುಗೆ ಕೊಠಡಿ ವೀಕ್ಷಣೆ ನಡೆಸಿ, ಅಡುಗೆ ಕೊಠಡಿಯಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಉತ್ತಮ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಮಕ್ಕಳಿಗೆ ಪೂರೈಸಬೇಕು. ಬಾಲಮಂದಿರದ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು. ಮಕ್ಕಳಿಂದ ಕುಂದು ಕೊರತೆ ಆಲಿಸಿದ ಅವರು, ಮಕ್ಕಳಿಗೆ ಆರೋಗ್ಯ ಸಮಸ್ಯೆಯಾಗದಂತೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಲಮಂದಿರದ ಆವರಣವನ್ನು ಸ್ವಚ್ಛವಾಗಿಡಬೇಕು. ಉತ್ತಮ ಗುಣಮಟ್ಟದ ಆಹಾರ ಹಾಗೂ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವುದನ್ನು ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ: ನಗರದ ಟಕ್ಕೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿನ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಕಟ್ಟಡ ಪರಿಶೀಲನೆ, ಆಹಾರ ಧಾನ್ಯಗಳ ಸಂಗ್ರಹ ಕೊಠಡಿ, ಒದಗಿಸುತ್ತಿರುವ ವೈದ್ಯಕೀಯ ಸೇವೆ ಮಾಹಿತಿ, ಅಡುಗೆ ಕೊಠಡಿ, ಆಹಾರದ ಗುಣಮಟ್ಟ ಹಾಗೂ ಕುಡಿಯುವ ನೀರು ಸೇರಿದಂತೆ ಕಲ್ಪಿಸಿರುವ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ನಿರಾಶ್ರಿತರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ತರಬೇತಿ ಹಾಗೂ ಕಟ್ಟಡದ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ಬೆಳೆಸಿ, ಪರಿಸರ ಪ್ರಜ್ಞೆ ಮೂಡಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲಿನ ನಿರಾಶ್ರಿತರೊಂದಿಗೆ ಸಂವಾದ ನಡೆಸಿ, ಅವರ ಯೋಗಕ್ಷೇಮ ವಿಚಾರಿಸಿದರು. ಸಮರ್ಪಕ ನೀರಿನ ವ್ಯವಸ್ಥೆ ಒದಗಿಸುವಂತೆ ಜಲಮಂಡಳಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 142 ಪರುಷ ಹಾಗೂ 33 ಜನ ಮಹಿಳೆಯರೂ ಸೇರಿದಂತೆ 175 ನಿರಾಶ್ರಿತರಿದ್ದು, ಅವರ ಆರೋಗ್ಯದ ಹಿತ ದೃಷ್ಟಿಯಿಂದ ಈ ಕೇಂದ್ರದಲ್ಲಿ ಹೊರ ಗುತ್ತಿಗೆ ಆಧಾರದ ಇಬ್ಬರೂ
ವೈದ್ಯರು ಹಾಗೂ ನರ್ಸಿಂಗ್ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು, ನಿರಾಶ್ರಿತರಿಗೆ ಪ್ರತಿನಿತ್ಯ ಬೆಳಿಗ್ಗೆ ಯೋಗಭ್ಯಾಸ ಮಾಡಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ ಮಾಹಿತಿ ನೀಡಿದರು.

ಪರೀಕ್ಷಾ ಕೇಂದ್ರಗಳಿಗೆ ಭೇಟಿ
ಜೂನ್ 30 ರಂದು ಶಿಕ್ಷಕರ ಅರ್ಹತಾ (ಟಿಇಟಿ-2024) ಪರೀಕ್ಷೆಗಳು ನಗರದ 43 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನಗರದ ಚೇತನಾ ಹಾಗೂ ಬಂಜಾರ ಕಾಲೇಜಿನಲ್ಲಿ ನಡೆದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷಾ ವ್ಯವಸ್ಥೆ, ಆಸನದ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದ ಅವರು, ಪರೀಕ್ಷಾರ್ಥಿಗಳಿಗೆ ಯಾವುದೇ ಸಮಸ್ಯೆಗಳು ಆಗದಂತೆ ಸುಗಮ ಹಾಗೂ ಸುವ್ಯವಸ್ಥಿತ ಪರೀಕ್ಷೆ ನಡೆಸುವಂತೆ ಪರೀಕ್ಷಾಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕ ಬಸವರಾಜ್ ಎಸ್ ನಾಟೀಕಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ

ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ

ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ

ವಿಜಯಪುರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮುಳವಾಡ ಕೈಗಾರಿಕಾ ಪ್ರದೇಶಕ್ಕೆ ಡಿಸಿ ಡಾ.ಆನಂದ.ಕೆ ಭೇಟಿ
    In (ರಾಜ್ಯ ) ಜಿಲ್ಲೆ
  • ಕಾರಜೋಳ ವಸತಿ ಶಾಲೆಗೆ ಡಿಸಿ ಡಾ.ಆನಂದ್ ಭೇಟಿ
    In (ರಾಜ್ಯ ) ಜಿಲ್ಲೆ
  • ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್‌ಪಿವಿ ಲಸಿಕೆ :ಡಾ.ಮಾಗಿ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಯನ್ನು ಬರ ಪೀಡಿತವೆಂದು ಘೋಷಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂನಿಂದ ೬೭,೫೦೦ ಕ್ಯೂಸೆಕ್ ನೀರು ಬಿಡುಗಡೆ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ಆಧಾರ್ ಸೇವೆ ಸ್ಥಗಿತ: ಸಾರ್ವಜನಿಕರ ಪರದಾಟ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ ವಿರೋಧಿ ಪ್ರತಿಭಟನೆಗೆ ಡಿಎಸ್ಸೆಸ್ ಬೆಂಬಲ
    In (ರಾಜ್ಯ ) ಜಿಲ್ಲೆ
  • ಕಾಂಗ್ರೆಸ್ ಸರ್ಕಾರದ ದಬ್ಬಾಳಿಕೆ ತಡೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • 13 ವರ್ಷ ಕಳೆದರೂ ನೀರಿಲ್ಲ: ಚಿಕ್ಕಲಕಿ ಕ್ರಾಸ್‌ನಲ್ಲಿ ರೈತರ ಆಕ್ರೋಶ ಸ್ಫೋಟ
    In (ರಾಜ್ಯ ) ಜಿಲ್ಲೆ
  • ಬಿಎಲ್ಡಿಇ ಎಸ್.ಎಸ್.ಎಂ ಕಾಲೇಜ‌ ಆಫ್ ಫಾರ್ಮಸಿಗೆ ೨ನೇ ಸ್ಥಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.