ಸಿಂದಗಿ: ಮಾನವನಿಗೆ ಆರೋಗ್ಯವೇ ಭಾಗ್ಯ ಎಂಬುದು ಸರ್ವಕಾಲಿಕ ಮಾತು ಇದು ಅಷ್ಟೇ ಸತ್ಯವೂ ಕೂಡ ಎಂದು ನಗರದ ಬೆಂಗಳೂರು ದವಾಖಾನೆಯ ವೈದ್ಯೆ ಡಾ.ವಿದ್ಯಾ ಬಡಿಗೇರ ಹೇಳಿದರು
ಪಟ್ಟಣದ ಜ್ಯೋತಿ ನಗರದ ಲಿಟಲ್ ವಿಂಗ್ಸ್ ಪ್ರಿಸ್ಕೂಲ್ ನಲ್ಲಿ ಹಮ್ಮಿಕೊಂಡ ವಿಶ್ವ ವೈದ್ಯರ ದಿನಾಚರಣೆಯ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯವನ್ನು ರಕ್ಷಿಸುವುದು, ಅನಾರೋಗ್ಯಕ್ಕೆ ಮದ್ದು ನೀಡಿ ಗುಣ ಪಡಿಸುವುದು ವೈದ್ಯರ ಕರ್ತವ್ಯವಾಗಿದೆ. ವೈದ್ಯೋ ನಾರಾಯಣ ಹರಿ ಎನ್ನುವುದು ಅದಕ್ಕೆ ಸಾಕ್ಷಿಯಾಗಿದೆ. ಅದಕ್ಕಾಗಿ ವೈದ್ಯರನ್ನು ದೇವರಿಗೆ ಹೊಲಿಸಲಾಗುತ್ತದೆ. ಈ ಪದ್ಧತಿಯೂ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ ಎಂದರು.
ಈ ವೇಳೆ ಅತಿಥಿಯಾಗಿ ಡಾ.ರವೀಂದ್ರನಾಥ ಗೋಡೆಕರ ಮಾತನಾಡಿ, ಅನಾರೋಗ್ಯಕ್ಕೆ ತುತ್ತಾದ ಪ್ರತಿಯೊಬ್ಬ ರೋಗಿಯನ್ನು ಸರಿಯಾದ ಚಿಕಿತ್ಸೆ ನೀಡುವ ಮೂಲಕ ಗುಣಪಡಿಸಿ, ಅವನಿಗೆ ಪುನರ್ಜನ್ಮ ನೀಡುವುದು ಪ್ರತಿಯೊಬ್ಬ ವೈದ್ಯರ ಕಾಯಕವಾದರೆ. ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಇಂತಹ ಪುನರ್ಜನ್ಮ ನೀಡುವ ವೈದ್ಯರಿಗೆ ವಿಶೇಷ ಗೌರವ ನೀಡುವ ಸಲುವಾಗಿ ಪ್ರತಿ ವರ್ಷ ಜುಲೈ ೧ರಂದು ರಾಷ್ಟ್ರೀಯ ವೈದ್ಯರ ದಿನವನ್ನು ಆಚರಿಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆ ಅಧ್ಯಕ್ಷ ಅಭಿಷೇಕ ಚೌಧರಿ, ಪೂಜಾ ಗಾಯಕವಾಡ, ಭಾಗ್ಯಶ್ರೀ ಕೊತಂಬರಿ, ನಗ್ಮಾ ಪಾಟೀಲ, ಸಂಗೀತಾ ಕರಾಬಿ, ಕಾವ್ಯಾ ಹಿಪ್ಪರಗಿ, ಸುಷ್ಮಾ ಚೌದ್ರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಶಿಕ್ಷಕಿ ಪ್ರಿಯಾಂಕಾ ಹೊಸಮನಿ ಸ್ವಾಗತಿಸಿ, ನಿರೂಪಿಸಿದರು.
Subscribe to Updates
Get the latest creative news from FooBar about art, design and business.
ವೈದ್ಯರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ :ಡಾ.ಗೋಡೆಕರ
Related Posts
Add A Comment

