ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಎನ್ನೆಸ್ಸೆಸ್ ಶಿಬಿರ
ವಿಜಯಪುರ: ವಿದ್ಯಾರ್ಥಿಗಳಿಗೆ ತಮ್ಮ ವ್ಯಕ್ತಿತ್ವ ವಿಕಸನ, ಶಿಸ್ತು, ಸ್ವಚ್ಛತೆ ಬಗ್ಗೆ ಜಾಗೃತಿ ಅಲ್ಲದೆ ನಿಮ್ಮ ಬದುಕು ಬದ್ಧತೆಯಿಂದ ಇರುವುದಾದರೆ ಇಂತಹ ಶಿಬಿರದ ಮೂಲಕದ ಸಾದ್ಯ. ಜೊತೆಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ನರೇಶಾನಂದ ಸ್ವಾಮೀಜಿ ಹೇಳಿದರು.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆಯ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯಡಿ ನಗರದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಲು ನಾವೆಲ್ಲರೂ ಶ್ರಮಿಸಬೇಕಾಗಿದೆ. ಮಹಾತ್ಮ ಗಾಂಧೀಜಿಯವರ ಕನಸಿನಂತೆ ಗ್ರಾಮಸ್ವರಾಜ್ಯದ ಪರಿಕಲ್ಪನೆಯನ್ನು ನಾವು ಸ್ಮರಿಸಬಹದು. ಅವರು ಹಾಕಿಕೊಟ್ಟ ಸನ್ಮಾರ್ಗವನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ. ಅದರಂತೆ ವಿದ್ಯಾರ್ಥಿಗಳು ಇಂತಹ ೭ ದಿನಗಳ ಕ್ಯಾಂಪ್‌ಗಳು ಕೇವಲ ಸ್ವಚ್ಛತೆ ಅಲ್ಲದೆ ಶಿಸ್ತು, ವ್ಯಕ್ತಿತ್ವ ವಿಕಸನ, ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಇಂತಹ ಶಿಬಿರವು ವಿದ್ಯಾರ್ಥಿಗಳಿಗೆ ಫಲಕಾರಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಮಾತನಾಡಿ, ಎನ್ ಎಸ್ ಎಸ್ ಧ್ಯೇಯ ಉದ್ದೇಶಗಳು ಸ್ವಚ್ಛತೆ, ವ್ಯಕ್ತಿತ್ವ ವಿಕಸನ,ಜೀವನದ ಮೌಲ್ಯಗಳನ್ನು ತಿಳಿಸಲು ಶಿಬಿರವು ಒಟ್ಟಾರೆಯಾಗಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದಿಗೆ ತುಂಬಾ ಸಹಾಯಕಾರಿಯಾಗಿದ್ದು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಕ್ರೀಯಾಶೀಲತೆ ಮತ್ತು ಉನ್ನತ ವ್ಯಕ್ತಿತ್ವಕ್ಕೆ ನಾಂದಿಯಾಗಿದೆ ವಿದ್ಯಾರ್ಥಿ ಹಂತದಲ್ಲಿ ಶೈಕ್ಷಣಿಕ ಹೊರತಾಗಿ ವಿವಿಧ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಐಕ್ಯೂಎಸಿ ನಿರ್ದೇಶಕರಾದ ಡಾ.ಪಿ.ಎಸ್.ಪಾಟೀಲ, ನ್ಯಾಕ್ ಸಂಯೋಜಕರಾದ ಡಾ.ಕೆ.ಮಹೇಶಕುಮಾರ, ಎನ್ ಎಸ್ ಎಸ್ ಅಧಿಕಾರಿಗಳಾದ ಡಾ.ಮಿಲನ್ ರಾಠೋಡ್, ಡಾ.ತರನ್ನುಮ್ ಜಬೀನ ಖಾನ್, ಡಾ.ಕೃಷ್ಣಾ ಮಂಡ್ಲಾ,ಮಹಾವಿದ್ಯಾಲಯದ ಬೊಧಕ, ಬೋಧಕೇತರ ಸಿಬ್ಬಂದಿ ಮತ್ತು ಶಿಬಿರಾರ್ಥಿಗಳು ಸೇರಿದಂತೆ ಉಪಸ್ಥಿತರಿದ್ದರು.

