ವಿಜಯಪುರ: ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರ ಜಯಂತಿಯನ್ನು ನಗರದ ಬಿ.ಎಲ್.ಡಿ.ಇ. ಸಂಸ್ಥೆಯಲ್ಲಿ ಮಂಗಳವಾರ ಆಚರಿಸಲಾಯಿತು.
ಸಂಸ್ಥೆಯ ಆವರಣದಲ್ಲಿರುವ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಆಡಳಿತಾಧಿಕಾರಿ ಡಾ. ಆರ್. ಬಿ. ಕೊಟ್ನಾಳ, ಸಂಶೋಧನೆ ಕೇಂದ್ರದ ಸಂಯೋಜನಾಧಿಕಾರಿ ವಿ. ಡಿ. ಐಹೊಳ್ಳಿ ಅವರು ಹಳಕಟ್ಟಿಯವರ ಸಮಾಧಿಗೆ ಪೂಜೆ ಸಲ್ಲಿಸಿದರು. ಅಲ್ಲದೇ, ಹಳಕಟ್ಟಿ ಅವರ ಭಾವಚಿತ್ರ ಮತ್ತು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಳಕಟ್ಟಿಯವರ ಮರಿಮೊಮ್ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಿ.ಎಲ್.ಡಿ.ಇ. ಸಂಸ್ಥೆಯ ವತಿಯಿಂದ ಹಳಕಟ್ಟಿಯವರ ಕುಟುಂಬಸ್ಥರಿಗೆ ಗೌರವಧನದ ಚೆಕ್ ವಿತರಿಸಿದರು. ಹಳಕಟ್ಟಿಯವರ ಮೊಮ್ಮಗ ಗಿರೀಶ ಹಳಕಟ್ಟಿ, ಅವರ ಪತ್ನಿ ಸುಜಾತಾ ಹಳಕಟ್ಟಿ ಮತ್ತು ಮರಿಮೊಮ್ಮಗ ಗುರುಪುತ್ರ ಹಳಕಟ್ಟಿ ಚೆಕ್ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ದೈಹಿಕ ಸಹಾಯಕ ನಿರ್ದೇಶಕ ಕೈಲಾಸ ಹಿರೇಮಠ, ಸಂಜು ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

