ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ೨೦೧೯ನೇ ಕ್ಯಾಲೆಂಡರ್ ವರ್ಷದಿಂದ ೨೦೨೩ನೇ ಕ್ಯಾಲೆಂಡರ್ ವರ್ಷಗಳಿಗೆ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು,ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆ ಸಮಿತಿ: ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಪಿ.ಎನ್.ದೇಸಾಯಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ.ಈಶ್ವರ ದೈತೋಟ, ಶಾಂತಲಾ ಧರ್ಮರಾಜ್ ಹಾಗೂ ಎಂ.ಎಸ್.ಮಣಿ ಸದಸ್ಯರಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.
ಟಿಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ:
ಕನ್ನಡದ ಹಿರಿಯ ಪರ್ತಕರ್ತ ಟಿ.ಎಸ್. ರಾಮಚಂದ್ರರಾವ್ ಅವರ ನೆನಪಿನಲ್ಲಿ ಸರ್ಕಾರ ಟಿಯೆಸ್ಸಾರ್ ಪ್ರಶಸ್ತಿ ನಿಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತ ೨ ಲಕ್ಷ ರೂ. ಆಗಿದ್ದು, ಕನ್ನಡ ಪತ್ರಿಕೋದ್ಯಮ, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಅಥವಾ ಎರಡರಲ್ಲೂ ಒಟ್ಟಿಗೆ ಕನಿಷ್ಠ ೩೦ ವರ್ಷಗಳ ಸೇವೆ ಸಲ್ಲಿಸಿರಬೇಕು. ಜೊತೆಗೆ ಕನ್ನಡ ಕ್ಷೇತ್ರಕ್ಕೆ ಭಾಷೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿರುವವರನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರತಿ ಕ್ಯಾಲೆಂಡರ್ ವರ್ಷಕ್ಕೆ ಒಬ್ಬರಿಗೆ ಮಾತ್ರ ಈ ಪ್ರಶಸ್ತಿಯನ್ನು ನೀಡಲಾಗುವುದು.
ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿ:
ಪತ್ರಿಕಾ ರಂಗದ ಭೀಷ್ಮರೆಂದೇ ಹೆಸರಾದ ಮೊಹರೆ ಹಣಮಂತರಾಯ ಅವರ ನೆನಪಿನಲ್ಲಿ ಸರ್ಕಾರವು ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತವು ೨ ಲಕ್ಷ ರೂ. ಆಗಿದ್ದು, ಕನ್ನಡದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಾವುದೇ ಪತ್ರಿಕೆಯನ್ನು ಅಥವಾ ಪತ್ರಿಕಾ ಸಮೂಹವನ್ನು ಸಮರ್ಥವಾಗಿ ಕಟ್ಟಿ ಬೆಳೆಸಿದ ಹಾಗೂ ಪ್ರವೃತ್ತಿಯಲ್ಲಿ ಪತ್ರಕರ್ತರಾಗಿ, ವೃತ್ತಿಯಲ್ಲಿ ಪತ್ರಿಕಾಲಯದ ಮಾಲೀಕರು, ಆಡಳಿತಗಾರರಾಗಿ ಕನಿಷ್ಠ ೩೦ ವರ್ಷ ಸೇವೆ ಸಲ್ಲಿಸಿರಬೇಕು.
ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು, ಮಾಧ್ಯಮ ಸಂಸ್ಥೆಗಳು ಹಾಗೂ ಇತರೆ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳು ಪೂರ್ಣ ದಾಖಲೆಗಳೊಂದಿಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಸೌಧ, ನಂ. ೧೭, ಭಗವಾನ್ ಮಹಾವೀರರಸ್ತೆ, ಬೆಂಗಳೂರು – ೫೬೦ ೦೦೧ ಇಲ್ಲಿಗೆ ೨೦೨೪ನೇ ಜುಲೈ ೨೫ರ ಸಂಜೆ ೫.೩೦ ಗಂಟೆ ಒಳಗಾಗಿ ಕಳುಹಿಸಿಕೊಡಬಹುದಾಗಿದೆ. ಅಥವಾ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ ಮೂಲಕ ಇಲ್ಲವೇ tsraward@gmail.com ಇಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಿಕೊಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚನೆ; ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ
Related Posts
Add A Comment
