ದೇವರಹಿಪ್ಪರಗಿ: ಮಳೆಗಾಲದಲ್ಲಿ ಸೋರುತ್ತಿರುವ ಅಂಗನವಾಡಿ, ಶಾಲಾ ಕೋಠಡಿಗಳ ಮಾಹಿತಿ ನೀಡುವುದು ಅಗತ್ಯವಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ(ಪಂಚಾಯತ್ ರಾಜ್) ಶಿವಾನಂದ ಮೂಲಿಮನಿ ಹೇಳಿದರು.
ಪಟ್ಟಣದ ಪ್ರವಾಸಿಮಂದಿರದಲ್ಲಿ ಮಂಗಳವಾರ ಜರುಗಿದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಜಿಲ್ಲಾ ಪಂಚಾಯಿತಿಯ ಆದೇಶದ ಅನ್ವಯ, ತಾಲ್ಲೂಕಿನ ಅಂಗನವಾಡಿ ಹಾಗೂ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಕೋಠಡಿಗಳಲ್ಲಿ ಮಳೆ ನೀರು ಸೋರಿಕೆ, ದುರಸ್ತಿ, ಶೌಚಾಲಯಗಳ ಕೊರತೆ, ಕುಡಿಯುವ ನೀರಿನ ಸಮಸ್ಯೆಗಳಿದ್ದಲ್ಲಿ ಕೂಡಲೇ ಮಾಹಿತಿ ನೀಡಬೇಕು. ಶಾಲೆಗಳ ಇಂಥ ನ್ಯೂನ್ಯತೆಗಳು ಮಕ್ಕಳ ಕಲಿಕೆಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತವೆ. ಆದ್ದರಿಂದ ಸಮೂಹ ಸಂಪನ್ಮೂಲ ವ್ಯಕ್ತಿಗಳು, ಅಂಗನವಾಡಿ ಮೇಲ್ವಿಚಾರಕರು ಯಾವುದೇ ತಪ್ಪು ಮಾಹಿತಿಗೆ ಅವಕಾಶ ನೀಡದೇ ಅಗತ್ಯ ಕ್ರಮವಹಿಸಲು ಸೂಚಿಸಿದರು.
ಕ್ಷೇತ್ರ ಸಮನ್ವಯ ಅಧಿಕಾರಿ ಐ.ಎಸ್.ಟಕ್ಕೆ ಮಾತನಾಡಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಪಿಡಿಓ ಅವರೊಂದಿಗೆ ಸಮನ್ವಯ ಸಾಧಿಸಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿಯನ್ನು ಜುಲೈ ೪ರ ಒಳಗಾಗಿ ತಾಲ್ಲೂಕು ಪಂಚಾಯಿತಿಗೆ ಸಲ್ಲಿಸಬೇಕು ಎಂದರು.
ಸಹಾಯಕ ನಿರ್ದೇಶಕ(ನರೇಗಾ) ಶಾಂತಗೌಡ ನ್ಯಾಮಣ್ಣವರ, ಎಸಿಡಿಪಿಓ ಜಯಶ್ರೀ ದೊಡಮನಿ, ಸಮೂಹ ಸಂಪನ್ಮೂಲ ವ್ಯಕ್ತಿಗಳು, ಅಂಗನವಾಡಿ ಮೇಲ್ವಿಚಾರಕಿಯರು, ಪಿಡಿಓ, ತಾ.ಪಂ, ಗ್ರಾ.ಪಂ ಸಿಬ್ಬಂದಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

