ಸಿಂದಗಿ: ಶಿಕ್ಷಕರ ಸಮುದಾಯ ಸೇವಾ ಮತ್ತು ಅರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸುವ ಮೂಲಕ ಭಾರತ ಸೇವಾದಳವನ್ನು ಉಳಿಸಿ ಬೆಳೆಸಬೇಕು ಎಂದು ಶಿಕ್ಷಣ ಸಂಯೋಜಕ ಆನಂದ ಮಾಡಗಿ ಹೇಳಿದರು.
ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯಲ್ಲಿ ವಿಜಯಪುರ ಜಿಲ್ಲಾ ಸಮಿತಿ ಭಾರತ ಸೇವಾದಳ, ತಾಲೂಕು ಸಮಿತಿ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ಇವರುಗಳ ಸಂಯೋಗದಲ್ಲಿ ಹಮ್ಮಿಕೊಂಡ ಸಿಂದಗಿ ತಾಲೂಕು ಮಟ್ಟದ ಭಾರತ ಸೇವಾದಳ ಶಿಕ್ಷಕರ ಪುನಃಶ್ಚೇತನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಸೇವಾದಳ ಸ್ವಾತಂತ್ರ‍್ಯ ಹೋರಾಟಗಾರರು ಮತ್ತು ದೇಶಭಕ್ತರನ್ನು ಹುಟ್ಟು ಹಾಕಿದ ಸಂಸ್ಥೆ. ಸ್ವಾತಂತ್ರ‍್ಯ ಚಳುವಳಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರಿಗೆ ಸಾತ್ ಕೊಟ್ಟ ಏಕೈಕ ಸಂಸ್ಥೆ ಎಂದರು.
ಈ ವೇಳೆ ತಾಲೂಕು ಸಮಿತಿ ಮಹಿಳಾ ಪ್ರತಿನಿಧಿ ಶ್ಯಾಮಲಾ ಮಂದೇವಾಲಿ ಮಾತನಾಡಿ, ಸೇವಾದಳದ ಶಿಕ್ಷಕರು ಮಕ್ಕಳಲ್ಲಿ ರಾಷ್ಟ್ರಭಕ್ತಿ, ದೇಶಪ್ರೇಮ, ಶಿಸ್ತು, ಸೇವಾ ಮನೋಭಾವನೆ, ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ನಾಮದೇವ ಚೌವ್ಹಾಣ, ಜಿಲ್ಲಾ ಸಮಿತಿ ಸದಸ್ಯ ಶಾಂತೇಶ ಕುಂಬಾರ,ಮುಖ್ಯಗುರು ಆರ್.ಬಿ.ಸಂಗಮೇಶ್ ಮಾತನಾಡಿದರು.
ಭಾರತ ಸೇವಾದಳದ ವಲಯ ಸಂಘಟಕ ನಾಗೇಶ ಡೋಣೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಅಧಿನಾಯಕ ಡಿ.ಸಿ.ಜಾಧವ್ ಕಾರ್ಯಕ್ರಮ ನಿರೂಪಿಸಿದರು. ಸಂಪನ್ಮೂಲ ಶಿಕ್ಷಕ ಆರ್.ಆರ್.ನಿಂಬಾಳ್ಕರ್ ಸ್ವಾಗತಿಸಿದರು. ಸಂಪನ್ಮೂಲ ಶಿಕ್ಷಕ ಎಸ್,ಆರ್, ಪಾಟೀಲ್ ವಂದಿಸಿದರು.
ಇಂದಿನ ಶಿಬಿರದಲ್ಲಿ ತಾಲೂಕಿನಿಂದ ೫೦ಕ್ಕೂ ಅಧಿಕ ಸೇವಾದಳದ ಶಿಕ್ಷಕರು ಇದ್ದರು. ಕಾರ್ಯಕ್ರಮದಲ್ಲಿ ಎಸ್,ಬಿ, ಚಾಗಶೆಟ್ಟಿ, ಸಂಗಣ್ಣ ಜೇರಟಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

