ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕಲೆ, ಸಾಹಿತ್ಯ, ಸಂಗೀತ, ನೃತ್ಯ, ರಂಗಭೂಮಿ, ಜಾನಪದ, ಯಕ್ಷಗಾನ, ಬಯಲಾಟ, ಶಿಲ್ಪಕಲೆ ಕ್ಷೇತ್ರಗಳಲ್ಲಿ ೨೫ ವರ್ಷಗಳ ಕಾಲ ಗಣನೀಯ ಸೇವೆ ಸಲ್ಲಿಸಿ ಸಂಕಷ್ಟದಲ್ಲಿರುವ ಸಾಹಿತಿ, ಕಲಾವಿದರಿಗೆ ಮಾಶಾಸನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಕನಿಷ್ಠ ೫೮ ವರ್ಷ ವಯೋಮಾನದವರಾಗಿರಬೇಕು. ವಿಕಲಚೇತನರಾಗಿದ್ದಲ್ಲಿ ೪೦ ವರ್ಷ ವಯೋಮಿತಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ವಾರ್ಷಿಕ ಆದಾಯ ೧ ಲಕ್ಷ ರೂ. ಮಿತಿಯಿರಬೇಕು. ಅರ್ಜಿದಾರರು ಸರ್ಕಾರದ ಯಾವುದೇ ಇಲಾಖೆಯ ಮಾಶಾಸನ, ಪಿಂಚಣಿ ಯೋಜನೆಗಳ ಫಲಾನುಭವಿಗಳಾಗಿರಬಾರದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸ:೦೮೩೫೨-೨೫೧೨೬೧ ಸಂಪರ್ಕಿಸಬಹುದು ಅಥವಾ ಸಹಾಯಕ ನಿರ್ದೇಶಕರ ಕಚೇರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಂದಗಲ್ ಶ್ರೀ ಹಣಮಂತರಾಯ ರಂಗಮಂದಿರ ಸ್ಟೇಶನ್ ರಸ್ತೆ ವಿಜಯಪುರ ಇವರಿಗೆ ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
