ವಿಜಯಪುರ: ೨೦೨೫ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ ೩೧ ಕೊನೆಯ ದಿನವಾಗಿದೆ.
ಸಾಮಾಜಿಕ ಕ್ಷೇತ್ರ, ಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜಸೇವೆ, ವಿಜ್ಞಾನ, ಸಾರ್ವಜನಿಕ ವ್ಯವಹಾರಗಳು, ನಾಗರೀಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರು ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ http://padmaawards.gov.inವೀಕ್ಷಿಸಬಹುದಾಗಿದೆ.
ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ ಕಚೆರಿಯಿಂದ ಅರ್ಜಿ ನಮೂನೆ ಪಡೆದುಕೊಂಡು ನಿಗದಿತ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸುವಂತೆಯೂ ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: ೦೮೩೫೨-೨೫೧೦೮೫, ಮೊ: ೯೪೮೦೮೮೬೫೫೫ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
