ವಿಜಯಪುರ: ೨೦೨೪-೨೫ನೇ ಯ ಸಾಲಿನಲ್ಲಿ ನ್ಯಾಯಾಂಗ ಆಡಳಿತದಲ್ಲಿ ಕಾನೂನು ಪದವೀಧರರಿಗೆ ತರಬೇತಿಗಾಗಿ ಆಯ್ಕೆ ಮಾಡುವ ಸಲುವಾಗಿ ಹಿಂದುಳಿದ ವರ್ಗಗಳಿಗೆ ( ಪ್ರವರ್ಗ ೧, ೨(ಎ), ೩ (ಎ), ಹಾಗೂ ೩ (ಬಿ) ) ಸೇರಿದ ಕಾನೂನು ಪದವೀಧರರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಮಾಸಿಕ ೪,೦೦೦ ರೂ ಭತ್ಯಯನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ ೧ ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಯ ಉಪನಿರ್ದಶಕರು ಹಾಗೂ ಜಿಲ್ಲಾ ಮಟ್ಟದ ಕಾನೂನು ಪದವೀಧರರ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
