ವಿಜಯಪುರ: ವಿಜಯಪುರದ ಕೃಷಿ ಮಹಾವಿದ್ಯಾಲಯದಲ್ಲಿ ಅಗ್ರಿ ಮೈಕ್ರೋಬಯಲಾಜಿ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರು(ಒಂದು ಹುದ್ದೆಗೆ) ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಜುಲೈ ೧೮ರಂದು ಮಧ್ಯಾಹ್ನ ೩.೦೦ ಘಂಟೆಗೆ ಸಂದರ್ಶನ ನಡೆಯಲಿದೆ.
ಅರ್ಹ ಶೈಕ್ಷಣಿಕ ಅರ್ಹತೆಯುಳ್ಳ ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಮೂಲ ದಾಖಲೆಗಳ ಎರಡು ಝರಾಕ್ಸ್ ಪ್ರತಿ ತಮ್ಮ ಭಾವ ಚಿತ್ರದೊಂದಿಗೆ ಅರ್ಜಿ ನಮೂನೆಗೆ ಲಗತ್ತಿಸಿ ಸಂದರ್ಶನದ ಸಮಯದಲ್ಲಿ ತರಲು ತಿಳಿಸಲಾಗಿದೆ. ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೦೮೩೫೨-೨೯೫೪೧೧ ಮೋ:೯೦೦೮೮೦೬೭೩೯ನ್ನು ಸಂಪರ್ಕಿಸಬಹುದು ಎಂದು ಕೃಷಿ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಕೃಷಿ ಮಹಾವಿದ್ಯಾಲಯ: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸಂದರ್ಶನ
Related Posts
Add A Comment
