ದೇವರಹಿಪ್ಪರಗಿ: ತಾಲ್ಲೂಕು ಆಡಳಿತದಿಂದ ವಚನ ಪಿತಾಮಹ ಫ.ಗು.ಹಳಕಟ್ಟಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿ ಹಾಗೂ ವಚನ ಸಂರಕ್ಷಣಾ ದಿನ ಆಚರಿಸಲಾಯಿತು.
ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಮಂಗಳವಾರ ಫ.ಗು.ಹಳಕಟ್ಟಿ ಅವರ ಜನ್ಮದಿನವನ್ನು ವಚನ ಸಾಹಿತ್ಯ ಸಂರಕ್ಷಣಾ ದಿನವನ್ನಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಸವ ಶರಣ ಸಂಗಮ ಸೇವಾ ಸಮೀತಿ ಅಧ್ಯಕ್ಷ ಸಂಗಣ್ಣ ತಡವಲ್ ಮಾತನಾಡಿ, ಬಸವಾದಿ ಶರಣರ ವಚನಗಳ ಸಂರಕ್ಷಣೆ ಮಾಡಿ, ಬೇರೆ ಬೇರೆ ಭಾಷೆಗಳಿಗೆ ಅನುವಾದಿಸಿ ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಫ.ಗು.ಹಳಕಟ್ಟಿಯವರ ಕಾರ್ಯ ತುಂಬಾ ಶ್ಲಾಘನೀಯ. ವಚನಗಳ ಮುದ್ರಣಕ್ಕಾಗಿ ತಮ್ಮ ಸ್ವಂತ ಮನೆಯನ್ನೇ ಮಾರಿದ ಹಳಕಟ್ಟಿಯವರ ಸ್ಮರಣೆಗಾಗಿ ವಚನ ಸಂರಕ್ಷಣಾ ದಿನ ಆಚರಿಸುತ್ತಿರುವುದು ಅಭಿನಂದನೀಯ ಸಂಗತಿ ಎಂದರು.
ಕಸಾಪ ತಾಲ್ಲೂಕು ಅಧ್ಯಕ್ಷ ಜಿ.ಪಿ.ಬಿರಾದಾರ ಮಾತನಾಡಿ, ಪತ್ರಿಕಾ ಸಂಪಾದಕರಾಗಿದ್ದು, ೧೯೨೬ ರಲ್ಲಿ ಬಳ್ಳಾರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಹಳಕಟ್ಟಿಯವರ ಬಾಲ್ಯಜೀವನ, ಅವರ ವಚನ ಸಂಗ್ರಹಕ್ಕೆ ಪ್ರೇರಣೆ, ಪಟ್ಟ ಕಷ್ಟ ಹಾಗೂ ಅಂದಿನ ರಾಜ್ಯಪಾಲರಾಗಿದ್ದ ಜಯಚಾಮ ರಾಜೇಂದ್ರ ಒಡೆಯರ್ ಅವರು ಹಳಕಟ್ಟಿ ಅವರ ಭೇಟಿಗೆ ಬಂದದನ್ನು ಸ್ಮರಿಸಿ, ಬಂಥನಾಳದ ಸಂಗನ ಬಸವಶ್ರೀಗಳೊಂದಿಗೆ ಬಿಎಲ್‌ಡಿಇ ಸಂಸ್ಥೆಯನ್ನು ಕಟ್ಟುವಲ್ಲಿ ಮುಖ್ಯ ಪಾತ್ರ ವಹಿಸಿದ್ದರು ಎಂದರು.
ತಹಶೀಲ್ದಾರ ಪ್ರಕಾಶ ಸಿಂದಗಿ ಅಧ್ಯಕ್ಷತೆ ವಹಿಸಿ, ಪೂಜಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.
ಶಿರಸ್ತೇದಾರುಗಳಾದ ಸುರೇಶ ಮ್ಯಾಗೇರಿ, ಡಿ.ಎಸ್.ಭೋವಿ, ರೇಷ್ಮೆ ಇಲಾಖೆಯ ಬಿ.ಬಿ.ಪಾಟೀಲ, ಪಿ.ಎಸ್.ಮಿಂಚನಾಳ, ರಾಜು ಕಂಠಿ, ಕಿರಣ ರಾಠೋಡ ಸೇರಿದಂತೆ ವಿವಿಧ ಇಲಾಖೆಗಳ ಸಿಬ್ಬಂದಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

