ವಿಜಯಪುರ: ಕರ್ನಾಟಕ ರಾಜ್ಯ ಸರಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ, ಬೆಂಗಳೂರು ಜಿಲ್ಲಾ ಸಮಿತಿ ವಿಜಯಪುರ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ವಿಜಯಪುರ ಇವರ ಮುಖಾಂತರ ರಾಜ್ಯದ ಮುಖ್ಯಮಂತ್ರಿಗಳಿಗೆ ಪ್ರತಿಭಟನೆ ಮಾಡುವುದರ ಮೂಲಕ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ಭೀಮಶೆಟ್ಟಿ ಯಂಪಳ್ಳಿ ರವರು ಮಾತನಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ , ಅಲ್ಪಸಂಖ್ಯಾತ, ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಘದಲ್ಲಿ ಕಳೆದ ೧೫ ರಿಂದ ೨೦ ವರ್ಷಗಳಿಂದ ಕಡಿಮೆ ಸಂಬಳಕ್ಕೆ ವಸತಿ ನಿಲಯ-ಶಾಲಾ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅಡುಗೆ ಸಹಾಯಕರು, ಸ್ವಚ್ಛತಾಗಾರರು , ಕಾವಲುಗಾರರು, ಡಿ ಗ್ರೂಪ್ ಅಟೆಂಡರ್, ಕಂಪ್ಯೂಟರ್ ಆಪರೇಟರ್ ಗಳು ಯಾವುದೇ ಭದ್ರತೆ ಇಲ್ಲದೆ ಕೆಲಸ ಮಾಡುತ್ತಾ ನಿರಂತರವಾಗಿ ವಾರ್ಡನ್ ರವರು, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಹೊರಗುತ್ತಿಗೆ ಸಿಬ್ಬಂದಿಗಳನ್ನು ಶೋಷಣೆ ಮಾಡುತ್ತಿದ್ದು, ಈ ಎಲ್ಲ ಶೋಷಣೆಗಳನ್ನು ನಿಲ್ಲಿಸುವಂತೆ ಮನವಿ ಮಾಡಿಕೊಂಡರು.
ಜಿಲ್ಲಾಧ್ಯಕ್ಷ ಹುಚ್ಚಪ್ಪ ಎಚ್.ಚಲವಾದಿ ಮಾತನಾಡಿ, ನೇರವಾಗಿ ಇಲಾಖೆಯಿಂದ ವೇತನ ಕೊಡಬೇಕು. ನಿವೃತ್ತಿವರೆಗೆ ಸೇವಾ ಭದ್ರತೆ ಕೊಡಬೇಕು. ೧೦ ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ಸಿಬ್ಬಂದಿಗಳನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮದ ಅಡಿಯಲ್ಲಿ ಎಲ್ಲರನ್ನೂ ತರಬೇಕು. ಕಾರ್ಮಿಕ ಇಲಾಖೆಯ ಕನಿಷ್ಟ ವೇತನ ಪರಿಷ್ಕರಣ ಸಮಿತಿ ಸಭೆ ಸೇರಿ ತೀರ್ಮಾನ ಮಾಡಿ ಕನಿಷ್ಟ ವೇತನ ೩೧ಸಾವಿರ ಕೊಡಬೇಕು. ಕಾರ್ಮಿಕ ಇಲಾಖೆಯ ಕಾನೂನು ಪ್ರಕಾರ ವಾರದ ರಜೆ ಕೊಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರಲ್ಲದೆ, ತಮ್ಮ ಅದ್ಯಕ್ಷತೆಯಲ್ಲಿ ಜಿಲ್ಲಾ ಅಧಿಕಾರಿಗಳು, ಕಾರ್ಮಿಕ ಇಲಾಖೆ ಅಧಿಕಾರಿಗಳು,ಸಂಘದ ಪದಾಧಿಕಾರಿಗಳೊಂದಿಗೆ ಜಂಟಿ ಸಭೆ ಕರೆಯುವಂತೆ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ರಾಜ್ಯ ಜಂಟಿ ಕಾರ್ಯದರ್ಶಿ ರಾಜೇಶ ದೇಶಪಾಂಡೆ, ಜಿಲ್ಲಾ ಉಪಾದ್ಯಕ್ಷರು, ವಿಜಯಪುರ. ಕಾಶೀಮ ಆಲದಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಮಸಳಿ,ಜಿಲ್ಲಾ ಸಹ ಕಾರ್ಯದರ್ಶಿ ಯಮನಪ್ಪ ಬಜಂತ್ರಿ, ಜಿಲ್ಲಾ ಖಜಾಂಚಿ ರಾಮಚಂದ್ರ ಕೋಳಿ, ಬೇಬಿ ಹೊಸಮನಿ, ಮೀನಾಕ್ಷಿ ತಳವಾರ, ಶಾಂತಾ ಪಾಟೀಲ, ರಾಮವ್ವ ಬಜಂತ್ರಿ, ಲಕ್ಷ್ಮೀ ಕಣಿಮನಿ, ಸುಮಿತ್ರಾ ತಳವಾರ, ರೇಣುಕಾ ಮಾಡಗಿ, ಅನಸೂಯಾ ಬಡಿಗೇರ, ಹೀನಾ ಪಡೇಕನೂರ, ಗೌರಕ್ಕ ಬೆಳ್ಳೂರ, ದಾನಮ್ಮ ಹೂಗಾರ, ನೂರಜಾನ ಯಲಗಾರ, ಮಲ್ಲಿಕಾರ್ಜುನ ಚಲವಾದಿ, ರಜನಿ ಬನಸೋಡೆ, ವೈಶಾಲಿ ಸಮಗೊಂಡ, ನಿತೀಶ ತಳಕೇರಿ, ಮಲಕಾರಿ ಮೋರೆ, ಸಂಗಮ್ಮ ಆಲಮೇಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಹಾಸ್ಟೇಲ್ ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
Related Posts
Add A Comment

