Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಿಗೆ ಶುಚಿತ್ವ ಮತ್ತು ಗುಣಮಟ್ಟದ ಆಹಾರ ಒದಗಿಸದಿದ್ದರೆ ಶಿಸ್ತು ಕ್ರಮ
(ರಾಜ್ಯ ) ಜಿಲ್ಲೆ

ಮಕ್ಕಳಿಗೆ ಶುಚಿತ್ವ ಮತ್ತು ಗುಣಮಟ್ಟದ ಆಹಾರ ಒದಗಿಸದಿದ್ದರೆ ಶಿಸ್ತು ಕ್ರಮ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಾಲಮಂದಿರಕ್ಕೆ ಭೇಟಿ ನೀಡಿದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಧಿಕಾರಿಗಳಿಗೆ ಎಚ್ಚರಿಕೆ

ವಿಜಯಪುರ: ಮಕ್ಕಳು ದೇವರ ಸಮಾನರು ಅವರ ಸೇವೆ ಮಾಡುವ ಸೌಭಾಗ್ಯ ದೊರೆತಿರುವ ಇಲ್ಲಿಯ ಸಿಬ್ಬಂದಿ ನಿಜಕ್ಕೂ ಭಾಗ್ಯವಂತರು. ಮಕ್ಕಳ ಸೇವಾ ಭಾಗ್ಯ ಒಂದು ಸೌಭಾಗ್ಯವೆಂದು ತಿಳಿಯಿರಿ. ಮಕ್ಕಳ ಸೇವೆಯೇ ಭಗವಂತನ ಸೇವೆ, ಬಾಲಮಂದಿರದಲ್ಲಿರುವ ಮಕ್ಕಳಿಗೆ ನೀವೇ ತಂದೆ-ತಾಯಿಯ ಪ್ರೀತಿಯನ್ನು ನೀಡಿ, ಪೋಷಿಸಿ, ಬೆಳೆಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ಅಣಿಗೊಳಿಸಿ ಎಂದು ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ನೂತನ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು. ಅವರು ಗುರುವಾರ ನಗರದ ಜಿಲ್ಲಾ ಪಂಚಾಯತ ಹತ್ತಿರವಿರುವ ಬಾಲಕರ ಬಾಲಮಂದಿರಕ್ಕೆ ಭೇಟಿ ನೀಡಿ ಅಲ್ಲಿರುವ ವ್ಯವಸ್ಥೆಯನ್ನ ಪರಿಶೀಲಿಸಿ ಮಾತನಾಡಿದರು.
ಬಾಲಮಂದಿರದಲ್ಲಿರುವ ಹಲವಾರು ನ್ಯೂನ್ಯತೆಗಳನ್ನು ಪಟ್ಟಿ ಮಾಡಿ ಒಂದು ವಾರದಲ್ಲಿ ಅವುಗಳನ್ನು ಸರಿಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು, ಸ್ವಚ್ಛತೆ, ಶುಚಿತ್ವ ಮತ್ತು ಗುಣಮಟ್ಟದ ಆಹಾರ ಒದಗಿಸದಿದ್ದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇದೇ ಸಂದರ್ಭದಲ್ಲಿ ಬಾಲ ಮಂದಿರದಲ್ಲಿ ಸಸಿ ನೆಟ್ಟ ಅವರು, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ ಬಿ ಪಾಟೀಲರು ಕೋಟಿ ವೃಕ್ಷ ಅಭಿಯಾನದ ಮೂಲಕ ಜಿಲ್ಲೆಯಾದ್ಯಂತ ಲಕ್ಷಾಂತರ ಸಸಿಗಳನ್ನು ನೆಟ್ಟು ನಮ್ಮೆಲ್ಲರಿಗೂ ಪ್ರೇರಕ ಶಕ್ತಿಯಾಗಿದ್ದಾರೆ. ಬಾಲಕರ ಬಾಲಮಂದಿರದ ಆವರಣದಲ್ಲಿ ಸಾಕಷ್ಟು ಜಾಗ ಇರುವುದರಿಂದ ಕೋಟಿ ವೃಕ್ಷ ಅಭಿಯಾನ ಹಾಗೂ ಅರಣ್ಯ ಇಲಾಖೆಯ ಸಹಯೋಗದಿಂದ ಆವರಣದ ತುಂಬಾ ಸಸಿಗಳನ್ನು ನೆಟ್ಟು ಪೋಷಿಸಿ, ಪರಿಸರ ಉಳಿಸುವ ಪುಣ್ಯದ ಕಾರ್ಯದಲ್ಲಿ ಪಾಲ್ಗೊಳ್ಳಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಬಾಲಮಂದಿರದ ಮಕ್ಕಳೊಂದಿಗೆ ಸಮಯ ಕಳೆದ ಅವರು, ಗ್ರಂಥಾಲಯದಲ್ಲಿರುವ ಪುಸ್ತಕಗಳನ್ನು ಓದಲು ಹಾಗೂ ಮಹಾಪುರುಷರ ಆದರ್ಶಗಳನ್ನು ಅಳವಡಿಸಿಕೊಂಡು ಶ್ರೇಷ್ಠ ನಾಗರಿಕರಾಗಿ ಭಾರತದ ಬೆಳಕಾಗಿ ಎಂದು ಮಕ್ಕಳಿಗೆ ಶುಭ ಹಾರೈಸಿದರು.
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷನಾದ ನಂತರ ನಾನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದೇನೆ ನನ್ನ ಭೇಟಿಯ ವೇಳೆ ಮೊದಲ ಆದ್ಯತೆ ಬಾಲಮಂದಿರಗಳಿಗೆ ಇರುತ್ತದೆ, ಯಾಕೆಂದರೆ ಅಲ್ಲಿ ಇರುವ ಮಕ್ಕಳು ತಂದೆ ತಾಯಿ ಇಲ್ಲದವರು, ಸಿಂಗಲ್ ಪೇರೆಂಟ್ ಇರುವವರು ಹೀಗೆ ಹಲವಾರು ಸವಾಲುಗಳನ್ನು ಎದುರಿಸುತ್ತಿರುವ ಮಕ್ಕಳ ಬಾಲ ಮಂದಿರಗಳಲ್ಲಿ ಇರುವುದರಿಂದ ಅಂಥ ಮಕ್ಕಳ ಬದುಕು ಹಸನಾಗಿಸುವ ಕೆಲಸ ನಾವೆಲ್ಲರೂ ಮಾಡಬೇಕಾಗಿದೆ. ಸರಕಾರ ಎಲ್ಲ ಸೌಲಭ್ಯಗಳನ್ನು ನೀಡಿದ್ದರೂ ಅದನ್ನು ಮಕ್ಕಳಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಕೆಲವು ಅಧಿಕಾರಿಗಳು ವಿಫಲರಾಗುತ್ತಿದ್ದಾರೆ. ಅಂಥವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಮಕ್ಕಳನ್ನು ಪ್ರೀತಿಪೂರ್ವಕವಾದ ಪರಿಸರದಲ್ಲಿ ಆರೋಗ್ಯ ಪೂರ್ಣವಾಗಿ ಸದೃಢ ನಾಗರಿಕರನ್ನಾಗಿ ಬೆಳೆಸಬೇಕಾದ ಜವಾಬ್ದಾರಿ ನಮ್ಮೆಲ್ಲರದು ಎಂದು ಬಬಲೇಶ್ವರ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೇರಿದಂತೆ ಬಾಲ ಮಂದಿರದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯುವಕರ ನ್ಯಾಯಯುತ ಹೋರಾಟ ಗೌರವಿಸಿ :ಬಬಲೇಶ್ವರ
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.