ವಿಜಯಪುರ: ನಗರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದಲ್ಲಿ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ನೂತನ ವಸತಿ ನಿಲಯ ಮಂಜೂರು ಮಾಡಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಋಷಿ ಆನಂದ್ ರವರಿಗೆ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಮನವಿ ಸಲ್ಲಿಸಲಾಯಿತು
ಮನವಿ ಸಲ್ಲಿಸಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ, ಅಕ್ಷಯಕುಮಾರ್ ಅಜಮನಿ ರಾಜ್ಯದ ಹಾಗೂ ವಿಜಯಪುರ ಜಿಲ್ಲೆಯಲ್ಲಿರುವ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ರಾಜ್ಯದ ನಾನಾ ಭಾಗಗಳಿಂದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ, ಈ ವರ್ಷವೂ ಕೂಡಾ ಹೆಚ್ಚಿನ ವಿದ್ಯಾರ್ಥಿನಿಯರು ಕೋರ್ಸ್ ಗಳಿಗೆ ಪ್ರವೇಶ ಪಡೆದುಕೊಂಡಿರುವುದರಿಂದ ವಿದ್ಯಾರ್ಥಿಗಳಿಗೆ ಕ್ಯಾಂಪಸ್‌ನಲ್ಲಿ ಈಗಿರುವ ವಸತಿ ನಿಲಯಗಳಲ್ಲಿ ಅವಕಾಶ ಸಿಗದೇ ಹೊರಗಡೆ ರೂಮ್ ಮಾಡಿಕೊಂಡು ಓದುವುದು ಕಷ್ಟದ ಸಂಗತಿ ಆಗಿದೆ. ಅದರಲ್ಲೂ ಕಾಲೇಜಿನ ಸಮಯಕ್ಕೆ ಸರಿಯಾಗಿ ಬಸ್‌ಗಳಿಲ್ಲದೆ ಕ್ಲಾಸ್‌ಗಳನ್ನು ತಪ್ಪಿಸುವ ಸಂಭವ ಉಂಟಾಗಿದೆ. ಪ್ರತಿದಿನ ಕಾಲೇಜಿನಿಂದ ರೂಮಿಗೆ ರೂಮಿನಿಂದ ಕಾಲೇಜಿಗೆ ಓಡಾಡುವದರಿಂದ ವಿದ್ಯಾಭ್ಯಾಸದಲ್ಲಿ ಕುಂಠಿತವಾಗುತ್ತಿದೆ. ಅದಕ್ಕಾಗಿ ಹೆಣ್ಣು ಮಕ್ಕಳ ರಕ್ಷಣೆ ಮತ್ತು ಹಿತ ದೃಷ್ಟಿಯಿಂದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ರಾಜ್ಯ ಸರ್ಕಾರ ನೂತನವಾಗಿ ಮಂಜೂರಾಗಿರುವ ವಸತಿ ನಿಲಯಗಳಲ್ಲಿ ಎರಡನ್ನು ವಿಶ್ವವಿದ್ಯಾಲಯದ ಕ್ಯಾಂಪಸ್ ಒಳಗಡೆ ಸ್ಥಾಪಿಸಬೇಕೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾದೇಶ್ ಚಲವಾದಿ, ಸತೀಶ್ ಅಂಜುಟಗಿ , ಯಾಷಿನ್ ಇನಾಮಾದಾರ್, ಸಂದೇಶ್ ಕುಮಟಗಿ, ರವಿ ವಾಲಿಕಾರ, ಪ್ರವೀಣ ಬನಸೋಡೆ, ಮಾಂತೇಶ ಚಲವಾದಿ, ಯುವರಾಜ್ ಓಲೆಕಾರ ಸೇರಿದಂತೆ ಹಲವರು ಭಾಗಿಯಾಗಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

