ವಿಜಯಪುರ: ಜಿಲ್ಲೆಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನಕ್ಕೆ ಪ್ರತಿ ಕ್ವಿಂಟಲ್ ೫೮೦೦ ರೂ. ಬೆಂಬಲ ಬೆಲೆ ನಿಗದಿಪಡಿಸಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ನಿರ್ಧರಿಸಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂಗಾರು ಹಂಗಾಮಿನಲ್ಲಿ ೯೪೮ ಹೆಕ್ಟೇರ್ ಕ್ಷೇತ್ರದಲ್ಲಿ ಕುಸುಬೆ ಬಿತ್ತನೆಯಾಗಿದ್ದು, ಅಂದಾಜು ೯೪೮೦ ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ ೪೭೦೦ ರಿಂದ ೪೭೫೦ ರೂ. ವರೆಗಿನ ದರದಿಂದ ಮಾರಾಟವಾಗುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಪ್ರತಿ ಕ್ವಿಂಟಾಲ್ ಕುಸುಬೆ ಉತ್ಪನ್ನಕ್ಕೆ ೫೮೦೦ ರೂ. ಬೆಲೆ ನಿಗದಿಪಡಿಸಿ ಖರೀದಿಸಲು ನಿರ್ಧರಿಸಲಾಗಿದೆ.
ಬೆಂಬಲ ಬೆಲೆಯಡಿ ಕುಸುಬೆ ಉತ್ಪನ್ನ ಖರೀದಿಗೆ ಜಿಲ್ಲೆಯ ಕೆಓಎಫ್ ಸಂಸ್ಥೆಯ ಎಣ್ಣೆ ಬೀಜ ಬೆಳಗಾರರ ಸಹಕಾರಿ ಸಂಘಗಳನ್ನು ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನಾಗಿ ಪರಿಗಣಿಸಲಾಗಿದ್ದು, ರೈತರ ನೊಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಜಿಲ್ಲೆಯಲ್ಲಿ ವಿಜಯಪುರ-ಬಬಲೇಶ್ವರ ತಾಲೂಕಿನ ಬಬಲೇಶ್ವರ ಹಾಗೂ ಸವನಹಳ್ಳಿ ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ, ಮುದ್ದೇಬಿಹಾಳ ತಾಲೂಕಿನ ತಂಗಡಗಿ, ಇಂಡಿ-ಚಡಚಣ ತಾಲೂಕಿನ ಚಡಚಣ, ಹಲಸಂಗಿ, ಎಣ್ಣೆ ಬೀಜ ಬೆಳೆಗಾರರ ಸಹಕಾರಿ ಸಂಘ, ಸಿಂದಗಿ ತಾಲೂಕಿನ ಸಿಂದಗಿ, ಟಿಎಪಿಸಿಎಂಎಸ್, ಹಾಗೂ ಬಸವನಬಾಗೇವಾಡಿ ತಾಲೂಕಿನಲ್ಲಿ ಟಿಎಪಿಸಿಎಂ ಬಸವನಬಾಗೇವಾಡಿಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.
ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ ೫ ಕ್ವಿಂಟಾಲ್‌ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ ೧೫ ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆಯನ್ನು ಖರೀದಿಸಬೇಕು. ಖರೀದಿ ಸಂಸ್ಥೆಗಳು ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ಮಾರ್ಗಸೂಚಿಯನ್ವಯ ಕುಸುಬೆ ಉತ್ಪನ್ನ ಖರೀದಿಸಬೇಕು. ರೈತರ ನೊಂದಣಿ ಕಾರ್ಯಕ್ಕೆ ಸಿಬ್ಬಂದಿ ಕೊರತೆಯಾದಲ್ಲಿ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಸಿಬ್ಬಂದಿಗಳನ್ನು ಬಳಸಿಕೊಂಡು ಆ ಸಿಬ್ಬಂದಿಗೆ ಸೂಕ್ತ ಗ್ರೇಡಿಂಗ್ ತರಬೇತಿ ನೀಡುವಂತೆ ಸಂಬಂಧಿಸಿದ ಖರೀದಿ ಸಂಸ್ಥೆಗಳಿಗೆ ಕ್ರಮ ವಹಿಸಬೇಕು. ಕುಸುಬೆ ಖರೀದಿ ಕೇಂದ್ರಗಳಲ್ಲಿ ವರ್ತಕರು ತರುವ ಕುಸುಬೆ ಖರೀದಿಸಬಾರದು ಖರೀದಿ ಸಂಸ್ಥೆಗಳ ದುರುಪಯೋಗವಾಗದಂತೆ ಮುನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಕುಸುಬೆ ಖರೀದಿ -ಕೇಂದ್ರಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕರು, ಕೆಓಎಫ್. ವಿಜಯಪುರ ಇವರ ಮೊ:೯೯೦೦೫೫೩೦೫೪ ಸಂಖ್ಯೆಗೆ ಸಂಪರ್ಕಿಸುವಂತೆ ತಿಳಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಕುಸುಬೆ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್ ೫೮೦೦ ರೂ. ಬೆಂಬಲ ಬೆಲೆ ನಿಗದಿ
Related Posts
Add A Comment
