ವಿಜಯಪುರ: ನಗರದ ಪಿ.ಡಿ.ಜೆ.ಕಾಲೇಜಿನ ಸಭಾಭವನದಲ್ಲಿ, ಜು.7 ರವಿವಾರ ಬೆಳಿಗ್ಗೆ 10-00 ಗಂಟೆಗೆ –
‘ಸ್ವಾತಂತ್ರ್ಯವೀರ ಸಾವರ್ಕರ್ ಮೇಲಿನ ಆರೋಪಗಳು ಸತ್ಯವೋ. ಮಿಥ್ಯವೋ.?’ ವಿಷಯದ ಮೇಲೆ ವಿಚಾರ ಸಂಕಿರಣ ಮತ್ತು ಸಾವರ್ಕರ್ ಸಮಗ್ರ ಸಂಪುಟ -1 ಮತ್ತು ಸಂಪುಟ-6 ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಜೀವನ ಚರಿತ್ರೆಯಾಧರಿತ ಕಾದಂಬರಿ ‘ಮಹಾಕಾಲ’ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು , ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ ವಹಿಸಿಕೊಳ್ಳಲಿದ್ದಾರೆ. ಕಾರ್ಯಕ್ರಮದ ಮುಖ್ಯ ವಕ್ತಾರರಾಗಿ ಸಾಹಿತಿಗಳು, ಇತಿಹಾಸಕಾರರಾದ ಡಾ.ಜಿ.ಬಿ.ಹರೀಶ , ಮುಖ್ಯ ಅತಿಥಿಗಳಾಗಿ ಪುಸ್ತಕ ಪ್ರಕಾಶಕರಾದ ಹರ್ಷ ಸಮೃದ್ಧ ಆಗಮಿಸುತ್ತಿದ್ದಾರೆ. ವೇದಿಕೆ ಮೇಲೆ ೨ ಮಹಾಸಭೆಗಳ ಅಧ್ಯಕ್ಷರು, ೭ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ೪ ಶಿಕ್ಷಣ ಸಂಸ್ಥೆಗಳ ಪ್ರಾಚಾರ್ಯರು, ವಕೀಲರ ಸಂಘದ ಅಧ್ಯಕ್ಷರು ಮತ್ತು ಇನ್ನಿತರರ ಗೌರವ ಉಪಸ್ಥಿತಿ ಇರಲಿದೆ ಎಂದು ಕಾರ್ಯಕ್ರಮವನ್ನು ಆಯೋಜಿಸಿರುವ ಮಂಥನ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9341092167 , 9663872037 ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಲು ಕೋರಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

