Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ಯಾರಂಟಿ ಯೋಜನೆಗೆ ದಲಿತರ ಅಭಿವೃದ್ಧಿ ಹಣ ಬಳಸಿಲ್ಲ :ಸಿಎಂ
(ರಾಜ್ಯ ) ಜಿಲ್ಲೆ

ಗ್ಯಾರಂಟಿ ಯೋಜನೆಗೆ ದಲಿತರ ಅಭಿವೃದ್ಧಿ ಹಣ ಬಳಸಿಲ್ಲ :ಸಿಎಂ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿರೋಧ ಪಕ್ಷಗಳ ಆರೋಪದಲ್ಲಿ ಹುರುಳಿಲ್ಲ | ಎಸ್ಸಿಎಸ್ಪಿ-ಟಿಎಸ್ಪಿ ಅನುದಾನ ಆಯಾ ವರ್ಷವೇ ಖರ್ಚು ಮಾಡಬೇಕೆಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ದಲಿತರ ಅಭಿವೃದ್ಧಿ ಮೀಸಲಿಟ್ಟಿರುವ SCP, TSP ಅನುದಾನ ಬಳಕೆ ಮಾಡುತ್ತಿದೆ ಎಂಬ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ಸ್ಪಷ್ಟನೆ ನೀಡಿದ್ದು, ಆರೋಪದಲ್ಲಿ ಹುರುಳಿಲ್ಲ ಎಂದು ಹೇಳಿದ್ದಾರೆ.
ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿಗಳ ಉಪ ಹಂಚಿಕೆ ಮತ್ತು ಬುಡಕಟ್ಟು ಉಪ ಹಂಚಿಕೆ ರಾಜ್ಯ ಪರಿಷತ್ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ”ದಲಿತ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಎಸ್ಸಿಎಸ್ಪಿ-ಟಿಎಸ್ಪಿ ಅಡಿ ಅನುದಾನ ಆಯಾ ವರ್ಷವೇ ಖರ್ಚು ಮಾಡಬೇಕು. ಈ ಸಂಬಂಧ ನಿರ್ಲಕ್ಷ್ಯ ತೋರಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.
ಅಂತೆಯೇ “ಇಡೀ ದೇಶದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಮೀಸಲಿಡಲು ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಮಾಡಿರುವುದು ನಮ್ಮ ಸರ್ಕಾರ ಮಾತ್ರ. ಇದರಿಂದ 2024-25ನೆ ಸಾಲಿಗೆ ಎಸ್ಸಿಎಸ್ಪಿ-ಟಿಎಸ್ಪಿ ಅಡಿ ಒಟ್ಟಾರೆ 39,121 ಕೋಟಿ ರೂ.ಅನುದಾನ ಒದಗಿಸಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಇದು ಶೇ.11ರಷ್ಟು ಅಂದರೆ 3,897 ಕೋಟಿ ರೂ.ಹೆಚ್ಚಳವಾಗಿದೆ. ಎಸ್ಸಿಎಸ್ಪಿ ಅಡಿ 27,673.96 ಕೋಟಿ ರೂ.ಹಾಗೂ ಟಿಎಸ್ಪಿ ಅಡಿ 11447.50 ಕೋಟಿ ರೂ.ಒದಗಿಸಲಾಗಿದೆ.
ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಮುಖ್ಯವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 8,480 ಕೋಟಿ ರೂ., ಇಂಧನ ಇಲಾಖೆಗೆ 5026 ಕೋಟಿ, ಸಮಾಜ ಕಲ್ಯಾಣ ಇಲಾಖೆಗೆ 4,174 ಕೋಟಿ ರೂ., ಕಂದಾಯ ಇಲಾಖೆಗೆ 3,403 ಕೋಟಿ ರೂ., ಗ್ರಾಮೀಣಾಭಿವೃದ್ಧಿ ಇಲಾಖೆಗೆ 3,163 ಕೋಟಿ ರೂ. ಒದಗಿಸಲಾಗಿದೆ ಎಂದರು.
ಅಲ್ಲದೆ ಕಳೆದ ವರ್ಷ 35221.84 ಕೋಟಿ ರೂ. ಆಯವ್ಯಯ ಹಂಚಿಕೆಗೆ ಎದುರಾಗಿ ಶೇ.97.23ರಷ್ಟು ಹಣ ಬಿಡುಗಡೆಗೆಯಾಗಿದ್ದು, ಅದರಲ್ಲಿ ಶೇ.99.64ರಷ್ಟು ಸಾಧನೆಯಾಗಿದೆ. ಈ ಅನುದಾನ ಯಾವ ಕಾರಣಕ್ಕೂ ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಇನ್ನು ಉಳಿಕೆ ಹಣ ವ್ಯಯವಾಗಬಾರದು. ಅದೇ ವರ್ಷ ವೆಚ್ಚವಾಗಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನಿಗಮಗಳಲ್ಲಿ ಹಣ ವೆಚ್ಚವಾಗಿಲ್ಲ. ಇದಕ್ಕೆ ಶಾಸಕರು ಪಟ್ಟಿ ಕೊಡಲಿಲ್ಲ ಎಂಬ ಕಾರಣ ನೀಡುತ್ತಾರೆ.
ನಿಗಮಗಳ ಅಧ್ಯಕ್ಷರು ಹಾಗೂ ಸಂಬಂಧಿಸಿದ ಸಚಿವರು, ಶಾಸಕರು ಫಲಾನುಭವಿಗಳ ಪಟ್ಟಿ ಒದಗಿಸುವಂತೆ ಮನವೊಲಿಸಬೇಕು. ಈ ಯೋಜನೆಗಳ ಮೌಲ್ಯಮಾಪನದಿಂದ ಶೇ.65 ರಷ್ಟು ಉಪಯೋಗವಾಗಿರುವುದು ಕಂಡು ಬರುತ್ತದೆ. ಸೆಕ್ಷನ್ 7(ಡಿ) ಕೈಬಿಡಲಾಗಿದೆ. ಇದರಿಂದಾಗಿ ಈ ಯೋಜನೆಯ ಸಂಪೂರ್ಣ ವೆಚ್ಚ ಈ ಸಮುದಾಯದವರಿಗೇ ಬಳಕೆಯಾಗಲಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಶಾಸಕರಾದ ಪ್ರಸಾದ್ ಅಬ್ಬಯ್ಯ, ಬಸಂತಪ್ಪ, ಶ್ರೀನಿವಾಸ್, ಪಿ.ಎಂ.ನರೇಂದ್ರಸ್ವಾಮಿ, ಕೃಷ್ಣಾ ನಾಯಕ್, ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಸಂಸದ ಸುನಿಲ್ ಬೋಸ್, ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಡಾ.ಶಾಲಿನಿ ರಜನೀಶ್ ಗೋಯೆಲ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಹಾಗೂ ವಿವಿಧ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ನಿರ್ಲಕ್ಷ್ಯ ವಹಿಸಿದರೆ ಕ್ರಮ

ಪರಿಶಿಷ್ಟ ಅನುದಾನ ಸದ್ಬಳಕೆಯಲ್ಲಿ ಶೇ.100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ. ಎಸ್ಸಿಪಿ-ಟಿಎಸ್ಪಿ ಕಾಯ್ದೆಯಲ್ಲಿದ್ದ 7 ‘ಡಿ’ ರದ್ದು ಮಾಡಿದ ರೀತಿಯಲ್ಲೇ 7 ‘ಸಿ’ ಕೂಡ ರದ್ದು ಮಾಡಬೇಕು ಎನ್ನುವ ಶಾಸಕ ನರೇಂದ್ರಸ್ವಾಮಿ ಸಲಹೆ ನೀಡಿದ್ದಾರೆ. ಈ ಸಲಹೆಯ ಸಾಧಕ-ಭಾದಕಗಳನ್ನು ಪರಿಶೀಲಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.