ವಿಜಯಪುರ: ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ದ್ರಾಕ್ಷಿ ಬೆಳೆ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (ಆರ್‌ಡಬ್ಲುಬಿಸಿಐಎಸ್) ಅನುಷ್ಠಾನಗೊಳಿಸಲು ಅಧಿಸೂಚಿಸಲಾಗಿದ್ದು, ಬೆಳೆ ಸಾಲ ಪಡೆದ ರೈತರು ಹಾಗೂ ಬೆಳೆ ಸಾಲ ಪಡೆಯದೆ ಇರುವ ರೈತರು ತಮ್ಮ ಆಧಾರ ಕಾರ್ಡ ಝರಾಕ್ಸ, ಪಹಣಿ ಪತ್ರಿಕೆ ಹಾಗೂ ಬ್ಯಾಂಕ್ ಪಾಸ್ ಬುಕ್ ಪ್ರತಿಯೊಂದಿಗೆ ಹತ್ತಿರದ ಬ್ಯಾಂಕುಗಳಲ್ಲಿ, ಗ್ರಾಮ ಒನ್ ಕೇಂದ್ರ ಅಥವಾ ಸಿಎಸ್‌ಸಿ ಸೆಂಟರ್‌ಗಳಲ್ಲಿ ವಿಮಾ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಕೋರಿದ್ದಾರೆ.
ದ್ರಾಕ್ಷಿ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಜುಲೈ ೧೫ ಕೊನೆಯ ದಿನವಾಗಿದೆ. ರೈತರು ರೂ. ೧೪,೦೦೦ ವಿಮಾ ಕಂತಿನ ಮೊತ್ತ ಪಾವತಿಸಬೇಕಾಗಿದ್ದು, ಕಡ್ಡಾಯವಾಗಿ ಎಫ್‌ಐಡಿ ಹಾಗೂ ಎನ್‌ಪಿಸಿಐ ಸೀಡಿಂಗ್ ಮಾಡಿಸಿರಬೇಕು.
ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆ, ರೈತ ಸಂಪರ್ಕ ಕೇಂದ್ರದ ಅಧಿಕಾರಿ ಹಾಗೂ ಹತ್ತಿರದ ಬ್ಯಾಂಕ್ ಶಾಖೆ, ಕುಮಾರಿ ಪವಿತ್ರಾ ಅಗ್ರಿಕಲ್ಚರ್ ಇನ್ಸುರೆನ್ಸ್ ಕಂಪನಿ ವಿಮಾ ಸಂಸ್ಥೆಯ ಪ್ರತಿನಿಧಿ ಮೊಬೈಲ್ ನಂ: ೮೮೯೯೮೮೭೮೭೩, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ವಿಜಯಪುರ – ಮೊ: ೯೫೩೫೧೮೫೯೯೯, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಇಂಡಿ – ಮೊ: ೯೦೦೮೪೦೪೦೪೧, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಸಿಂದಗಿ- ಮೊ: ೮೧೯೭೪೬೪೬೭೫, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಬ.ಬಾಗೇವಾಡಿ – ಮೊ: ೯೮೪೫೨೧೫೩೬೨, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮುದ್ದೇಬಿಹಾಳ – ಮೊ.೮೧೨೩೬೮೬೯೦೩ ಇವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
