ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸಿಕ್ಯಾಬ್ ಸಂಸ್ಥೆಯ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಇವರ ಸಹಯೋಗದೊಂದಿಗೆ ಜುಲೈ ೧೧ ರಂದು ಬೆಳಿಗ್ಗೆ ೧೦ ಗಂಟೆಗೆ ಬಾಗಲಕೋಟೆ ರಸ್ತೆಯಲ್ಲಿರುವ ಸಿಕ್ಯಾಬ್‌ನ ಮಲಿಕ್ ಸಂದಲ್ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಎಂಎನ್‌ಸಿ ಕಂಪನಿಗಳು ಹಾಗೂ ಸ್ಥಳೀಯ ಖಾಸಗಿ ಕಂಪನಿಗಳಿಂದ ನೇಮಕಾತಿಗಾಗಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಹಾಗೂ ಯಾವುದೇ ಪದವಿ ಪಾಸಾದ ೩೫ ವರ್ಷ ವಯೋಮಾನದ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಶಾಲಾ ದಾಖಲಾತಿಗಳ ಸಹಿತ ಸ್ವವಿವರ, ಆಧಾರ ಕಾರ್ಡಗಳ ಎರಡು ಸೆಟ್ ಝರಾಕ್ಸನೊಂದಿಗೆ ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ (ಮೊ:೭೭೬೦೯೪೪೨೮೬) ಹಾಗೂ (ಮೊ:೯೯೪೫೦೦೦೭೯೩) ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
