ವಿಜಯಪುರ: ರಾಜ್ಯ ಸರ್ಕಾರದ ಕ್ರೀಡಾ ವಿದ್ಯಾರ್ಥಿವೇತನ ಯೋಜನೆಯಡಿ ಪ್ರತಿಭಾವಂತ ಕ್ರೀಡಾಪುಟಗಳನ್ನು ಪ್ರೋತ್ಸಾಹಿಸುವ ಮಾಧ್ಯಮಿಕ-ಪ್ರೌಢಶಾಲಾ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ ೧೦ ಸಾವಿರ ರೂ. ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ಪಡೆಯಲು ಅರ್ಹರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾ ಪಟುಗಳು ಅಧಿಕೃತ ಜಾಲತಾಣ https://sevasindhuservices.karnataka.gov.in ಮೂಲಕ ಆನ್‌ಲೈನ್‌ನಲ್ಲಿ ದಿನಾಂಕ : ೨೦-೦೭-೨೦೨೪ರೊಳಗೆ ಅರ್ಜಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ವಿಜಯಪುರ ದೂ: ೦೮೩೫೨-೨೫೧೦೮೫, ಮೊ: ೯೪೮೦೮೮೬೫೫೫ ಸಂಖ್ಯೆಗೆ ಸಂಪರ್ಕಿಸುವಂತೆ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
