Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಡಿಸಿ ಟಿ.ಭೂಬಾಲನ್ ಸೂಚನೆ
(ರಾಜ್ಯ ) ಜಿಲ್ಲೆ

ಪರಿಸರ ಸ್ನೇಹಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಡಿಸಿ ಟಿ.ಭೂಬಾಲನ್ ಸೂಚನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಲಮೂಲಗಳಾದ ನದಿ, ಕೆರೆ, ಕಾಲುವೆ ಮತ್ತು ಭಾವಿಗಳು ಮಾಲಿನ್ಯಕ್ಕೊಳಗಾಗದಂತೆ ಸಂರಕ್ಷಿಸುವ ಉದ್ದೇಶದಿಂದ ಪರಿಸರ ಸ್ನೇಹಿ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಔಷದೀಯ ಗುಣವುಳ್ಳ ಸಸಿಗಳನ್ನು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮುಂದಾಗುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚಿಸಿದ್ದಾರೆ.
ಜಿಲ್ಲೆಯಾದ್ಯಂತ ಪರಿಸರ ಸ್ನೇಹಿ ಗಣೇಶ ವಿಗ್ರಹ ಪ್ರತಿಷ್ಠಾಪನೆ ಕುರಿತು ಇತ್ತೀಚೆಗೆ ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪರಿಸರ ಅಧಿಕಾರಿಗಳು, ಕೆ.ಎಸ್.ಪಿ.ಎಸಿ.ಬಿ. ವಿಜಯಪುರ ಹಾಗೂ ಮುಖ್ಯಾಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪರಿಸರ ಸಂರಕ್ಷಣೆ ಹಾಗೂ ನೀರಿನ ಸಂರಕ್ಷಣೆಗಾಗಿ ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡಂತಹ ಯಾವುದೇ ರೀತಿಯ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ವಿಗ್ರಹಗಳ ಉತ್ಪಾದನೆ, ಮಾರಾಟ ಹಾಗೂ ನೀರಿನ ಮೂಲಗಳಲ್ಲಿ ವಿಸರ್ಜನೆ ನಿಷೇಧಿಸಲಾಗಿದ್ದು, ಇಂತಹ ವಿಗ್ರಹಗಳ ಮಾರಾಟ, ಉತ್ಪಾದನೆಗೆ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆ ಸಹಯೋಗದಲ್ಲಿ ನಿಯಂತ್ರಣ ಮಾಡಬೇಕು. ವಿವಿಧ ಮಾಧ್ಯಮಗಳ ಮೂಲಕ ಈ ಕುರಿತು ಸಾರ್ವಜನಿಕರಲ್ಲಿ ತಿಳುವಳಿಕೆ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ್ದಾರೆ.
ಔಷಧೀಯ ಗುಣವುಳ್ಳ ಬೀಜವನ್ನು ಮಣ್ಣಿನ ಶೀಡ್‌ಬಾಲ್‌ದಲ್ಲಿ ತಯಾರಿಸಿ ಗಣಪತಿ ಮೂರ್ತಿಯಲ್ಲಿ ಇಟ್ಟು ಮಾರಾಟ ಮಾಡಲು ಎಲ್ಲ ಮೂರ್ತಿ ತಯಾರಕರಿಗೆ ಹಾಗೂ ಮಾರಾಟಗಾರರಿಗೆ ತಿಳಿ ಹೇಳಿ, ವಿಸರ್ಜನೆ ನಂತರ ಸಾರ್ವಜನಿಕರು ಔಷಧೀಯ ಗುಣವುಳ್ಳ ಸಸ್ಯವನ್ನು ತಮ್ಮ ತಮ್ಮ ಮನೆಯ ಪಾಟ್‌ಗಳಲ್ಲಿ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗುವಂತೆ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಅನಧಿಕೃತವಾಗಿ ವಿಗ್ರಹಗಳ ತಯಾರಿ-ಮಾರಾಟ ಮಾಡುವವರ ಮೇಲೆ ಹಾಗೂ ನಗರ ಸ್ಥಳೀಯ ಮುಖ್ಯಸ್ಥರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ ಅವರು, ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಎಲ್ಲ ಮೂರ್ತಿ ತಯಾರಕರು, ಗಣೇಶ ಉತ್ಸವ ಸಮಿತಿ ಸದಸ್ಯರು, ಊರಿನ ಮುಖಂಡರುಗಳು, ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರನ್ನೊಳಗೊಂಡು ಸಭೆ ನಡೆಸಿ ಸರ್ಕಾರದ ಆದೇಶ-ನಿರ್ದೇಶನಗಳನ್ನು ಪಾಲಿಸುವಂತೆ ಸೂಕ್ತ ತಿಳುವಳಿಕೆ ನೀಡುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಮನಿಯಾರ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪರಿಸರ ಅಭಿಯಂತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ

“ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ

‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳಲ್ಲಿ ಒಳ್ಳೆಯ ಅಭ್ಯಾಸಗಳ ರೂಢಿ
    In ವಿಶೇಷ ಲೇಖನ
  • “ನಮ್ಮ ಕಥಾ ಅರಮನೆ” ಮುನ್ನಡೆಸುವ ರೂವಾರಿ ಡಾ.ರಾಜಶೇಖರ ನಾಗೂರ
    In ವಿಶೇಷ ಲೇಖನ
  • ‘ನಮ್ಮ ಕಥಾ ಅರಮನೆ’ ಕನ್ನಡದ ಅಕ್ಷರೋತ್ಸವಕ್ಕೆ ೮ನೇ ವಾರ್ಷಿಕೋತ್ಸವ ಸಂಭ್ರಮ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 24, 2026
    In ದಿನಪತ್ರಿಕೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.