ಸಿಂದಗಿ: ಜು.೧೦ರಂದು ತಾಲೂಕು ಆಡಳಿತ ಸೌಧದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಸಿಂದಗಿ ತಾಲೂಕಿನ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಅಹವಾಲು ಸ್ವೀಕರಿಸುವ ಕಾರ್ಯಕ್ರಮದಲ್ಲಿ ತಾಲೂಕಿನ ಸಾರ್ವಜನಿಕರು ಭರ್ತಿ ಮಾಡಿ ಅರ್ಜಿ ಮತ್ತು ನೋಟರಿಗಳಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರಕಾರಿ ಕಛೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ, ಲಂಚದ ಬೇಡಿಕೆ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ನೀಡುವ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು. ಪರಿಹಾರ ಕಂಡುಕೊಳ್ಳಬಹುದಾದ ದೂರುಗಳಿಗೆ ಸ್ಥಳದಲ್ಲಿಯೇ ಸಂಬಂಧಿಸಿದ ಸ್ಥಳೀಯ ಅಧಿಕಾರಿಗಳಿಂದ ಇತ್ಯರ್ಥಗೊಳಿಸಲು ಪ್ರಯತ್ನಿಸಲಾಗುವುದು. ಕಳಪೆ ಕಾಮಗಾರಿ, ಸರಕಾರಿ ಹಣದ ದುರುಪಯೋಗ ಸೇರಿದಂತೆ ಅನೇಕ ದೂರುಗಳಿಗಾಗಿ ಕಾರ್ಯಾಲಯದ ದೂರವಾಣಿ ೦೮೩೫೨-೨೫೫೩೩೩, ೨೫೭೭೮೬, ೨೯೫೦೭೪ ಸಂಖ್ಯೆಗೆ ಸಂಪರ್ಕಿಸಬೇಕು ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿ ಟಿ.ಮಲ್ಲೇಶ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ೯೩೬೪೦೬೨೫೨೮, ಉಪಾಧೀಕ್ಷ ೯೩೬೪೦೬೨೫೫೭, ಲೋಕಾಯುಕ್ತ ಪಿಎಸ್‌ಐ-೧ ೯೩೬೪೦೬೨೬೪೦, ಪಿಎಸ್‌ಐ-೨ ೯೩೬೪೦೬೨೬೩೯ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
