ವಿಜಯಪೂರ: ೨೦೨೪-೨೫ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ಮುಂಗಾರು ರೈತರ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಲು ಆಗಸ್ಟ್ ೩೧ರವರೆಗೆ ಕಾಲಾವಕಾಶ ವಿಸ್ತರಿಸಲಾಗಿದೆ. ರೈತರು ತಮ್ಮ ಜಮೀನಿನ ಬೆಳೆ ಸಮೀಕ್ಷೆಯನ್ನು ತಾವೇ ಕೈಗೊಳ್ಳಲು ಆಗದೇ ಇದ್ದಲ್ಲಿ ತಮ್ಮ ಜಮೀನಿನಲ್ಲಿ ಬೆಳೆದ ವಿವಿಧ ಬೆಳೆಗಳ ಮಾಹಿತಿಯನ್ನು ಖಾಸಗಿ ನಿವಾಸಿಗಳ (ಪಿಆರ್) ಮೂಲಕ ಖುದ್ದಾಗಿ ಕ್ಷೇತ್ರದಲ್ಲಿದ್ದು, ದಿನಾಂಕ:೧೫-೦೮-೨೦೨೪ ರಿಂದ ೩೦-೦೯-೨೦೨೪ರ ಒಳಗಾಗಿ ನಿಖರವಾಗಿ ಬೆಳೆ ವಿವರಗಳನ್ನು ದಾಖಲಿಸಬೇಕೆಂದು ಜಂಟಿ ಕೃಷಿ ನಿರ್ದೇಶಕರಾದ ಡಾ. ಡಿ.ಡಬ್ಲೂ ರಾಜಶೇಖರ ಅವರು ತಿಳಿಸಿದ್ದಾರೆ.
ರೈತರು ಗೂಗಲ್ ಪ್ಲೇ ಸ್ಟೋರ್ ಅಥವಾ ಕ್ಯೂ ಆರ್ ಕೋಡ್‌ನಿಂದ ಮುಂಗಾರು ಬೆಳೆ ಸಮೀಕ್ಷೆ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಸ್ವತಃ ತಾವೇ ಬೆಳೆ ಸಮೀಕ್ಷೆ ಮಾಡಿ ಬೆಳೆದ ಬೆಳೆ ವಿವರಗಳನ್ನು ದಾಖಲಿಸಬಹುದಾಗಿದೆ. ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಾಗುವ ಮಾಹಿತಿಯನ್ನು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ, ಖರೀದಿ, ಬೆಳೆ ಪರಿಹಾರ ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ವಿವಿಧ ಇಲಾಖೆಗಳ ಸವಲತ್ತುಗಳನ್ನು ಪಡೆಯಲು ಉಪಯೋಗಿಸಲಾಗುವುದು.
ಈ ನಿಟ್ಟಿನಲ್ಲಿ ರೈತರೇ ತಮ್ಮ ಮೊಬೈಲ್ ಮೂಲಕ ಸಕಾಲಿಕವಾಗಿ ಬೆಳೆ ವಿವರಗಳನ್ನು ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡುವುದರಿಂದ ನ್ಯೂನ್ಯತೆಗಳನ್ನು ಕಡಿಮೆ ಮಾಡಬಹುದು ಹಾಗೂ ಸೌಲಭ್ಯಗಳಿಂದ ವಂಚಿತರಾಗುವುದನ್ನು ತಪ್ಪಿಸಬಹುದಾಗಿದ್ದು, ಜಿಲ್ಲೆಯ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಹೆಚ್ಚಿನ ಮಾಹಿತಿಗಾಗಿ ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
