ವಿಜಯಪುರ: ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನದ ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ ಇತ್ಯಾದಿ ಕಲಾ ಪ್ರಕಾರಗಳಲ್ಲಿ ೨೦೨೨ ಹಾಗೂ ೨೦೨೩ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಿದೆ.
ಆಯ್ಕೆಯಾದ ಪುಸ್ತಕಕ್ಕೆ ರೂ. ೨೫,೦೦೦ ಬಹುಮಾನ ನೀಡಲಾಗುವುದು. ಯಕ್ಷಗಾನದ ವಿವಿಧ ಆಯಾಮಗಳ ಬಗ್ಗೆ ಸಂಗೀತ, ಆಹರ‍್ಯ, ಅಭಿನಯ, ಸಂಶೋಧನೆ, ವಿಮರ್ಶೆ, ಜೀವನ ಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪ್ರಥಮ ಮುದ್ರಣ ಆವೃತ್ತಿಯ ಸ್ವರಚಿತ ಪುಸ್ತಕಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ. ಬಹುಮಾನಕ್ಕೆ ಸಲ್ಲಿಸುವ ಪುಸ್ತಕವು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು ಹಾಗೂ ಸಂಪಾದಿತ ಅಥವಾ ಅಭಿನಂದನ ಕೃತಿಯಾಗಿರಬಾರದು.
ಪುಸ್ತಕಗಳನ್ನು ರಿಜಿಸ್ಟಾçರ್, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು-೫೬೦ ೦೦೨, ಇವರಿಗೆ ೨೦೨೪ರ ಜುಲೈ ೨೫ರ ಒಳಗಾಗಿ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಕಡ್ಡಾಯವಾಗಿ ಕಳುಹಿಸುವುದು. ಯಾವುದೇ ಕಾರಣಕ್ಕೂ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ. ಅರ್ಜಿಗಳನ್ನು ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದೂ ಹೆಚ್ಚಿನ ಮಾಹಿತಿಗಾಗಿ ದೂ:೦೮೦-೨೨೧೧೩೧೪೬ ಅನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Related Posts
Add A Comment