Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ ಸಂಸದನ ಅಭಿನಂದನಾ ಸಮಾರಂಭದಲ್ಲಿ ಮದ್ಯದ ಹೊಳೆ!
(ರಾಜ್ಯ ) ಜಿಲ್ಲೆ

ಬಿಜೆಪಿ ಸಂಸದನ ಅಭಿನಂದನಾ ಸಮಾರಂಭದಲ್ಲಿ ಮದ್ಯದ ಹೊಳೆ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಕ್ಕಬಳ್ಳಾಪುರ ಸಂಸದ ಡಾ. ಕೆ.ಸುಧಾಕರ್ ಅಭಿನಂದನಾ ಸಮಾರಂಭ | ಮದ್ಯ-ಬಾಡೂಟಕ್ಕೆ ಮುಗಿಬಿದ್ದ ಜನ | ಎಲ್ಲೆಡೆ ಭಾರೀ ಟೀಕೆ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಕೆ ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ, ಬಾಡೂಟಕ್ಕೆ ಜನರು ಮುಗಿಬಿದ್ದಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.
ನೆಲಮಂಗಲದ ಹೊರವಲಯದಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭಕ್ಕೆ ಆಗಮಿಸಿದ್ದ ಜನರಿಗಾಗಿ ಭರ್ಜರಿ ಬಾಡೂಟ ವ್ಯವಸ್ಥೆ ಮಾಡಲಾಗಿತ್ತು.
ಬಗೆಬಗೆಯ ಬಾಡೂಟ ಖಾದ್ಯಕ್ಕಾಗಿ ಜನರ ನೂಕುನುಗ್ಗಲು ಏರ್ಪಟ್ಟಿತ್ತು. ಸಮಾರಂಭಕ್ಕೆ ಬಂದಿದ್ದ ಕಾರ್ಯಕರ್ತರಿಗೆ ಬಾಡೂಟದ ಜೊತೆಗೆ ಮದ್ಯವನ್ನೂ ಕೂಡ ನೀಡಲಾಗಿತ್ತು. ಎಣ್ಣೆ ಪಡೆದುಕೊಳ್ಳಲು ಜನರ ನೂಕುನುಗ್ಗಲು ಏರ್ಪಟ್ಟಿತ್ತು. ಈ ವೇಳೆ ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.
ನೆಲಮಂಗಲ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಪ್ರಾಯೋಜಕತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಂಸಾಹಾರ, ಬಿಯರ್, ಗಟ್ಟಿ ಮದ್ಯದ ಪ್ಯಾಕೆಟ್‌ಗಳನ್ನು ವಿತರಿಸಲಾಯಿತು ಎಂದು ವರದಿಗಳು ತಿಳಿಸಿವೆ.
ಸಮಾರಂಭದ ಸಂಘಟಕರು 10,000-15,000 ಜನರನ್ನು ನಿರೀಕ್ಷಿಸಿದ್ದರು. ಆದರೆ, 60,000 ಕ್ಕೂ ಹೆಚ್ಚು ಜನರು ಸೇರಿದ್ದರು. ನಿರೀಕ್ಷಿತ ಸಂಖ್ಯೆಯೇ ಆಗಿದ್ದರೂ ಜನಸಂದಣಿಯನ್ನು ನಿಯಂತ್ರಿಸುವುದು ಕಷ್ಟವಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಭವಿಷ್ಯದಲ್ಲಿ ಅಬಕಾರಿ ಇಲಾಖೆ ಇಂತಹ ಸಾರ್ವಜನಿಕ ಕಾರ್ಯಕ್ರಮಗಳಿಗೆ ಪರವಾನಗಿ ನೀಡಬಾರದು ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿಕೆ ಬಾಬಾ ಅವರು ಮದ್ಯ ಪೂರೈಸಲು ಪರವಾನಗಿ ನೀಡದಂತೆ ಅಬಕಾರಿ ಇಲಾಖೆಗೆ ಸೂಚಿಸಿದ್ದರೂ ನಿರ್ಲಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಬಕಾರಿ ಇಲಾಖೆಯ ಉಪಆಯುಕ್ತ ನಾಗೇಶ್ ಕುಮಾರ್ ಅವರು ಮಾತನಾಡಿ, ಕಾರ್ಯಕ್ರಮ ಆಯೋಜಕರು ಅನುಮತಿಗಾಗಿ ನೆಲಮಂಗಲ ಡಿವೈಎಸ್ಪಿ ಮುಂದೆ ಮನವಿ ಮಾಡಿಕೊಂಡಿದ್ದರು. 11,500 ರೂ ಶುಲ್ಕವನ್ನೂ ಪಾವತಿಸಿದರು, ನಂತರ ನಾವು ಒಂದು ದಿನದ ಪರವಾನಗಿಯನ್ನು ನೀಡಿದ್ದೆವು ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮಾಜಿ ಶಾಸಕ ನಾಗರಾಜು, ಜೆಡಿಎಸ್‌ನ ಮಾಜಿ ಎಂಎಲ್‌ಸಿ ಇ.ಕೃಷ್ಣಪ್ಪ ಕೂಡ ಭಾಗವಹಿಸಿದ್ದು ಕಂಡು ಬಂದಿತ್ತು.

“ಮದ್ಯ ವಿತರಣೆ ಬಗ್ಗೆ ನನಗೆ ತಿಳಿದಿಲ್ಲ. ಇಂತಹದ್ದನ್ನು ನಾನು ಪ್ರೋತ್ಸಾಹಿಸುವುದೂ ಇಲ್ಲ. ಕಾರ್ಯಕ್ರದಲ್ಲಿ ಭಾಗವಹಿಸಿದ್ದವರು ಎಲ್ಲೋ ಮದ್ಯವನ್ನು ಖರೀದಿಸಿದ್ದು, ಅದನ್ನು ಸ್ಥಳಕ್ಕೆ ತಂದಿರಬಹುದು.”
-ಡಾ ಕೆ.ಸುಧಾಕರ್
ಬಿಜೆಪಿ ಸಂಸದರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ

ಮದ್ಯ ಹಂಚಿಕೆ ಬಗ್ಗೆ ಬಿಜೆಪಿ ಅಧ್ಯಕ್ಷರು ಉತ್ತರಿಸಲಿ :ಡಿಕೆಶಿ

ಬೆಂಗಳೂರು: ಬಿಜೆಪಿ ಸಂಸದ ಡಾ. ಕೆ.ಸುಧಾಕರ್ ಅವರು ಕಾರ್ಯಕರ್ತರಿಗೆ ಮದ್ಯ ಹಂಚಿರುವ ಬಗ್ಗೆ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉತ್ತರಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸೋಮವಾರ ಅವರು ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸುತ್ತಾ, ನೆಲಮಂಗಲದಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಮದ್ಯ ಹಂಚಿಕೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸುವುದು ಬೇರೆ ವಿಚಾರ. ಆದರೆ ಬಿಜೆಪಿ ಪ್ರಮುಖ ನಾಯಕರು ಇದಕ್ಕೆ ಸ್ಪಷ್ಟನೆ ನೀಡಬೇಕು. ಬಿಜೆಪಿಯ ಇಂಥ ಸಂಸ್ಕೃತಿ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರಿಗಿಂತ ರಾಷ್ಟ್ರೀಯ ನಾಯಕರು ಉತ್ತರಿಸಲಿ ಎಂದು ಡಿಕೆಶಿ ಆಗ್ರಹಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.