ಆಲಮಟ್ಟಿ: ಇಲ್ಲಿಯ ಆಲಮಟ್ಟಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ರೈತರ ಅನುಕೂಲಕ್ಕಾಗಿ ಮುಂಗಾರು ಬೆಳೆಗಾಗಿ ಕಾಲುವೆಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಆಗ್ರಹಿಸಿತು.
ಸೋಮವಾರ ಸಂಘಟನೆಯ ನಾನಾ ಪದಾಧಿಕಾರಿಗಳು ಕೆಬಿಜೆಎನ್ಎಲ್ ಮುಖ್ಯ ಎಂಜಿನಿಯರ್ ಅವರಿಗೆ ಮನವಿ ಅರ್ಪಿಸಿ ತಕ್ಷಣವೇ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿದರು.
ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಮುಂಗಾರು ಬಿತ್ತನೆಗೆ ಮಳೆಯಾಗಿದೆ. ಈಗ ಎಲ್ಲೆಡೆ ಬಿತ್ತನೆ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಈಗ ಬೀಜ ನಾಟಿಯಾಗಲು ನೀರಿನ ಕೊರತೆಯಾಗಿದೆ. ಮಳೆಯಾಗುತ್ತಿಲ್ಲ. ಈಗ ನೀರಿನ ಅಗತ್ಯವಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇನ್ನೂ ಕೆಲದಿನಗಳಲ್ಲಿ ಜಲಾಶಯ ಭರ್ತಿಯಾಗಲಿದೆ. ಕಾಲುವೆಗೆ ನೀರು ಹರಿಸಲು ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ನೀರು ಬಳಕೆದಾರರ ಸಲಹಾ ಸಮಿತಿ ಸಭೆ ನಡೆಯಬೇಕು ಎನ್ನುವ ಸಬೂಬು ಬಿಟ್ಟು, ಮೊದಲು ನೀರು ಹರಿಸಿ ನಂತರ ಐಸಿಸಿ ಸಭೆಯಲ್ಲಿ ಅನುಮತಿ ಪಡೆಯಬೇಕು ಎಂದು ಆಗ್ರಹಿಸಿದರು.
ಗಾಳಿ ಜೋರಾಗಿ ಬೀಸುತ್ತಿದ್ದು ಮಳೆಯಾಗುತ್ತಿಲ್ಲ. ಇದರಿಂದ ಮೆಕ್ಕೆಜೋಳ, ಹೆಸರು, ತೊಗರಿ, ಸೂರ್ಯಕಾಂತಿ ಬೆಳೆ ಕಮರಿ ಹೋಗುತ್ತಿವೆ ಎಂದರು.
ಹೊನಕೇರಪ್ಪ ತೆಲಗಿ, ಈರಣ್ಣ ದೇವರಗುಡಿ, ರೇವಣಸಿದ್ದ ಐಗಳಿ, ಹಿರೇಮಠ ಮತ್ತೀತರರು ಇದ್ದರು.
ಮುಖ್ಯ ಎಂಜಿನಿಯರ್ ಎಚ್.ಎನ್. ಶ್ರೀನಿವಾಸ ಮನವಿ ಸ್ವೀಕರಿಸಿದರು. ಸೂಪರಿಂಟೆಂಡೆಂಟ್ ಎಂಜಿನಿಯರ್ ಗೋವಿಂದ ರಾಠೋಡ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

