ವಿಜಯಪುರ: ಗೃಹಲಕ್ಷ್ಮೀ ಯೋಜನೆಯ ಪ್ರಯೋಜನ ಪಡೆಯಲು ತೃತೀಯ ಲಿಂಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗೃಹಲಕ್ಷ್ಮೀ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್ಜೆಂಡರ್ ಪರ್ಸನ್ಸ್ ವತಿಯಿಂದ ಪಡೆಯುವ ತೃತೀಯ ಲಿಂಗಿಯ ಗುರುತಿನ ಚೀಟಿಯನ್ನು ಪರಿಗಣಿಸಲಾಗುವುದು. ಜಿಲ್ಲೆಯ ತೃತೀಯ ಲಿಂಗಿಗಳು ಟ್ರಾನ್ಸ್ಜೆಂಡರ್ ಗುರುತಿನ ಚೀಟಿ, ಭಾವಚಿತ್ರ ಮತ್ತು ಆಧಾರ ಕಾರ್ಡ್ ಅರ್ಜಿ ಜೊತೆಗೆ ಲಗತ್ತಿಸಿ, ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕನಾಟಕ ರಾಜ್ಯ ಮಹಿಳಾ ನಿಗಮದ ಅಭಿವೃದ್ಧಿ ನಿರೀಕ್ಷಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಚೇರಿಯ ದೂ:೦೮೩೫೨-೨೯೫೩೫೩ ಅನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
