ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅಲ್ಪ ಸಂಖ್ಯಾತ ವರ್ಗಕ್ಕೆ ಸೇರಿದ ಸಿಇಟಿ, ನೀಟ್ ಪರೀಕ್ಷೆಗೆ ಹಾಜರಾಗಿ ವೈದ್ಯಕೀಯ, ಎಂಬಿಬಿಎಸ್, ಬಿಡಿಎಸ್, ಬಿಇ, ಬಿಟೆಕ್, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಬಿ.ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ಚಿಕಿತ್ಸೆ ಕೋರ್ಸ್ಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗಾಗಿ ಸಾಲ ಸೌಲಭ್ಯವನ್ನು ವಿಸ್ತರಿಸಲು ಅರಿವು ಸಾಲ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ ೨೦ ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ನಿಗಮದ ವೆಬ್‌ಸೈಟ್ hಣಣಠಿ://ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ/ ನ ಮೂಲಕ ಅರ್ಜಿ ಸಲ್ಲಿಸಿ, ಸಲ್ಲಿಕೆಯಾದ ಅರ್ಜಿಯ ಪ್ರತಿಯನ್ನು ಅವಶ್ಯಕ ದಾಖಲಾತಿಗಳೊಂದಿಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು ಎಂದೂ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿಯ ದೂ:೦೮೩೫೨-೨೭೮೩೪೪ ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
