ವಿಜಯಪುರ: ಜುಲೈ ೧೧ ರಂದು ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಬೆಳಗ್ಗೆ ೯ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿವೃತ್ತದ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯವರೆಗೆ ಜನಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
