ಬಸವನಬಾಗೇವಾಡಿ: ಸಾಧನೆ ಮಾಡಿದವರನ್ನು ಪುರಸ್ಕಾರಗಳು ಹುಡುಕಿಕೊಂಡು ಬರುತ್ತವೆ. ಬಡತನ ಸಾಧನೆಗೆ ಅಡ್ಡಿಯಾಗಲಾರದು. ಸಾಧನೆಗೆ ನಿರಂತರ ಪರಿಶ್ರಮದ ಅಗತ್ಯತೆ ಇದೆ ಎಂದು ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ ಹೇಳಿದರು.
ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ ಮಂಗಳವಾರ ಬಸವನಬಾಗೇವಾಡಿ ಗೆಳೆಯರ ಬಳಗ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಶಾಲೆಯ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ನಗದು ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಧನೆ ಮಾಡಿದವರನ್ನು ಸಮಾಜ ಗುರುತಿಸಿ ಗೌರವಿಸಬೇಕು. ಪ್ರತಿಯೊಬ್ಬರೂ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಗುಣ ಬೆಳೆಸಿಕೊಳ್ಳಬೇಕೆಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಸಿಗುವ ವಿದ್ಯಾರ್ಥಿ ವೇತನ ಸೇರಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ತಿಳಿದುಕೊಂಡು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯಲು ಇಂದಿನಿಂದಲೇ ನಿರಂತರ ಪ್ರಯತ್ನದಲ್ಲಿ ತೊಡಗಬೇಕು. ಕ್ಲಿಷ್ಟವೆನಿಸಿದ ವಿಷಯಗಳನ್ನು ಶಿಕ್ಷಕರಿಂದ ಪರಿಹರಿಸಿಕೊಳ್ಳಬೇಕು ಎಂದು ಹೇಳಿದರು.
ಶಿಕ್ಷಕ ಅಶೋಕ ಹಂಚಲಿ ಮಾತನಾಡಿ, ಸಾಧನೆಗೆ ಸಾಕಷ್ಟು ಮಾರ್ಗಗಳಿವೆ. ಸೂಕ್ತ ಮಾರ್ಗದರ್ಶನದಲ್ಲಿ ಸಿದ್ದತೆ ನಡೆಸಬೇಕು. ನಯ ವಿನಯತೆ, ಆದರ್ಶ ಬದುಕು ರೂಪಿಸಿಕೊಂಡು ಕಲಿತ ಶಾಲೆ, ಸಮಾಜದ ಕೀರ್ತಿ ಹೆಚ್ಚಿಸಬೇಕು. ಗೆಳೆಯರ ಬಳಗದವರು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಬಸವನಬಾಗೇವಾಡಿ ಗೆಳೆಯರ ಬಳಗದ ಅಧ್ಯಕ್ಷ ಶಿವಪುತ್ರ ಕೆಂಬಾವಿ, ಉಪಪ್ರಾಚಾರ್ಯ ರಮೇಶ ಪೂಜಾರಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಶೇಖರ ಗೊಳಸಂಗಿ, ಉಪಾಧ್ಯಕ್ಷ ದಸ್ತಗೀರ ತಾಂಬೋಳಿ ಇದ್ದರು.
ಪ್ರೊ.ಪಿ.ಎಲ್.ಹಿರೇಮಠ ನಿರೂಪಿಸಿದರು. ನಿವೃತ್ತ ಸಿಪಿಐ ಎಂ.ಬಿ.ಗೊಳಸಂಗಿ ವಂದಿಸಿದರು. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸಂಜನಾ ಯಳಮೇಲಿ, ಸಚೀನ ಲಮಾಣಿ, ನಿತೀಶ ಸೌದಾಗರ ಅವರನ್ನು ಸನ್ಮಾನಿಸಿ ನಗದು ಬಹುಮಾನ ವಿತರಿಸಲಾಯಿತು.
Subscribe to Updates
Get the latest creative news from FooBar about art, design and business.
Related Posts
Add A Comment

