ವಿಜಯಪುರ: ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರಿಗೂ ಅವಕಾಶ ಕಲ್ಪಿಸಲಾಗಿದ್ದು, ಜಿಲ್ಲೆಯಲ್ಲಿ ಮಂಗಳವಾರ ೧೫ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಿದ್ದು, ಬಾಕಿ ಉಳಿದ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಿ ಗೃಹಲಕ್ಷ್ಮೀ ಯೋಜನೆ ಸದುಪಯೋಗ ಪಡೆದುಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸರ್ಕಾರ ಮಹಿಳೆಯರ ಸರಿಸಮಾನವಾಗಿ ಲಿಂಗತ್ವ ಅಲ್ಪಸಂಖ್ಯಾಥರನ್ನೂ ಗೃಹಲಕ್ಷ್ಮೀ ಫಲಾನುಭವಿಗಳೆಂದು ಪರಿಗಣಿಸಿ ಅವರ ಖಾತೆಗಳಿಗೂ ಸಹ ಹಣ ಜಮೆ ಮಾಡಲು ನಿರ್ಧರಿಸಿದೆ. ಜಿಲ್ಲೆಯಲ್ಲಿ ೨೫೦೦ಕ್ಕೂ ಹೆಚ್ಚು ಲಿಂಗತ್ವ ಅಲ್ಪಸಂಖ್ಯಾತರಿದ್ದು, ಸಧ್ಯ ೨೬೦ ಜನರು ಮಾತ್ರು ಗುರುತಿನ ಚೀಟಿ ಹೊಂದಿದ್ದು, ಅವರಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ. ಅರ್ಹ ಲಿಂಗತ್ವ ಅಲ್ಪಸಂಖ್ಯಾತರು ಜಿಲ್ಲಾಡಳಿತ ನೀಡುವ ಗುರುತಿನ ಚೀಟಿ ಪಡೆದು, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿದರೆ ಅವರ ಖಾತೆಗೂ ಮಾಸಿಕ ಎರಡು ಸಾವಿರ ರೂ. ಜಮೆಯಾಗಲಿದ್ದು, ಈ ಯೋಜನೆಯಡಿ ಜಿಲ್ಲೆಯ ಎಲ್ಲ ಲಿಂಗತ್ವ ಅಲ್ಪಸಂಖ್ಯಾತರು ಜಿಲ್ಲಾಡಳಿತದಿಂದ ಗುರುತಿನ ಚೀಟಿ ಪಡೆದು ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಗೃಹಲಕ್ಷ್ಮೀ: ೧೫ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಸಲ್ಲಿಕೆ
Related Posts
Add A Comment
