ವಿಜಯಪುರ: ಪಕ್ಷ ಸಂಘಟನೆಯಲ್ಲಿ ಹೋರಾಟ ಮಾಡುತ್ತ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವಲ್ಲಿ ಶ್ರಮಿಸಿರುವ ಬಿಜೆಪಿ ರಾಜ್ಯ ವಕ್ತಾರ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಬೇಕು ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಗೋಪಾಲ ಘಟಕಾಂಬಳೆ ಆಗ್ರಹಿಸಿದ್ದಾರೆ.
ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ ಅವರು ಅಲ್ಪ ಸಮಯದಲ್ಲೇ ರಾಜ್ಯ ಪ್ರವಾಸ ಮಾಡಿ ಪಕ್ಷ ಕಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ವಿಧಾನಸಭಾ, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿ ಅವರ ಗೆಲುವಿಗೆ ಶ್ರಮಿಸಿದ್ದಾರೆ ಎಂದು ತಿಳಿಸಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆಮಾಡಿ ಸಾಮಾಜಿಕ ಪ್ರಾತಿನಿಧ್ಯ ಕೊಡೆಬೇಕು ಎಂದು ಪ್ರಕಟಣೆಯಲ್ಲಿ ಗೋಪಾಲ ಘಟಕಾಂಬಳೆ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

