ಸಿಂದಗಿ: ನಮ್ಮ ಸಂಘ ನೌಕರರ ಕ್ಷೇಮಾಭಿವೃದ್ಧಿಗೆ ಮಾತ್ರ ಸೀಮಿತವಾಗದೆ ರಾಷ್ಟç ಮತ್ತು ರಾಜ್ಯದಲ್ಲಿ ಸಂಭವಿಸುವ ಪ್ರಕೃತಿ ವಿಕೋಪ, ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿ ಸೇವಾ ಕಾರ್ಯ ನಿರ್ವಹಿಸುವ ಮೂಲಕ ದೇಶದಲ್ಲಿಯೇ ಮಾದರಿ ಸಂಘಟನೆ ನಮ್ಮದಾಗಿದೆ ಎಂದು ನೌಕರರ ಸಂಘದ ತಾಲೂಕಾಧ್ಯಕ್ಷ ಅಶೋಕ ತೆಲ್ಲೂರ ಹೇಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ನೌಕರರ ಬಳಗ ಮನವಿ ಸಲ್ಲಿಸಿದ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಅಶೋಕ ತೆಲ್ಲೂರ, ಆಲಮೇಲ ತಾಲೂಕಾಧ್ಯಕ್ಷ ರವಿ ಬಿರಾದಾರ ಮಾತನಾಡಿ, ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಹಳೆ ಪಿಂಚಣಿ ಯೋಜನೆ, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಕೂಡಲೇ ಜಾರಿಗೊಳಿಸಬೇಕು. ರಾಜ್ಯ ೭ನೆಯ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರಕಾರಿ ನೌಕರರ ವೇತನ ಭತ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸಬೇಕು. ರಾಜ್ಯದ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ತಾಲೂಕು ಸರ್ಕಾರಿ ನೌಕರರ ಸಂಘ ಪದಾಧಿಕಾರಿಗಳಾದ ಗಿರೀಶ ಗತಾಟೆ, ರವಿ ಬಿರಾದಾರ, ಎಮ್.ಜಿ ಯಂಕಂಚಿ, ಸಿದ್ದು ಕಡಕಗಾಂವ, ಗುರು ಬಿರಾದಾರ, ಆನಂದ ಭೂಸನೂರ, ಆರ್.ಎಚ್. ಬಿರಾದಾರ, ಎ.ಎಚ್. ವಾಲೀಕಾರ, ಸಿ.ಬಿ ಗಡಗಿ, ಸುರೇಶ ಬಬಲೇಶ್ವರ, ಸಂತೋಷ ಕಾಳಶೆಟ್ಟಿ, ಗಂಗಾಧರ ಸೋಮನಾಯಕ, ಪಂಡಿತ ವಾಸೇನ, ಬಸವರಾಜ ಸೊಂಪೂರ, ಸಂತೋಷ ಬಂದೆ ಮತ್ತು ನಿವೃತ್ತ ನೌಕರರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ರಾಜ್ಯ ಸರ್ಕಾರಿ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶಾಸಕರಿಗೆ ಸರ್ಕಾರಿ ನೌಕರರ ಮನವಿ
Related Posts
Add A Comment

