ಸಿಂದಗಿ: ಮಕ್ಕಳಿಗೆ ಎರಡನೆಯ ತಾಯಿಯಾಗಿ ಪೂರ್ವ ಪ್ರಾಥಮಿಕ ಶಿಕ್ಷಣ ನೀಡುವ ಅಂಗನವಾಡಿ ಕಾರ್ಯಕರ್ತೆಯರ ಶ್ರಮಕ್ಕೆ ಬೆಲೆ ಕಟ್ಟಲಾಗದು. ಅವರ ಶ್ರಮ ಬಹಳಷ್ಟಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಎಪಿಎಂಸಿ ಯಾರ್ಡ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಮೇಲ್ವಿಚಾಕರಿಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ, ಸ್ಮಾರ್ಟ್ ಫೋನ್, ಸಮವಸ್ತç, ಫಲಾಣುಭವಿಗಳಿಗೆ ಔಷಧಿ ಕಿಟ್ ಹಾಗೂ ತೂಕದ ಯಂತ್ರಗಳ ಸಾಮಗ್ರಿ ವಿತರಣಾ ಕಾರ್ಯಕ್ರಮದಲ್ಲಿ ಮಕ್ಕಳ ಪ್ರಪಂಚ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು ಪಾರದರ್ಶಕತೆ ಮತ್ತು ಪ್ರಾಮಾಣಿಕವಾಗಿ ಈ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಮುಖ್ಯವಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಂದರೆ ತಾಯಿ ಮಗುವಿನ ಸಂಬAಧ ಸಮಾಜ ಈ ಇಲಾಖೆಯ ಮೇಲೆ ನಿಂತಿದೆ.
ಈ ವೇಳೆ ಜಿಲ್ಲಾ ಉಪ-ನಿರ್ದೇಶಕ ಕೆ.ಕೆ.ಚವ್ಹಾಣ ಮಾತನಾಡಿ, ಸರಕಾರ ಅಂಗನವಾಡಿ ಕಾರ್ಯಕತೆಯರಿಗೆ ೩೦೯ ಸ್ಮಾರ್ಟ್ ಫೋನ್, ೬೧೮ ಪಲಾನುಭವಿಗಳಿಗೆ ವಿವಿಧ ಸಾಮಗ್ರಿಗಳನ್ನು ವಿತರಣೆ ಮಾಡಲಾಗಿದೆ. ಮಹಿಳೆಯರಿಗೆ ಮತ್ತು ಮಕ್ಕಳಿಗೆ ಪೌಷ್ಠಿಕ ಆಹಾರ, ಸರಕಾರದ ಯೋಜನೆ, ಸಮುದಾಯಕ್ಕೆ ಸೇವೆ ನೀಡಲು ಈ ಯೋಜನೆ ಹಮ್ಮಿಕೊಳ್ಳಲಾಗಿದೆ. ಅಂಗನವಾಡಿ ಎಂಬುದು ಮಾಹಿತಿ ಸೇವಾ ಕೇಂದ್ರವಾಗಿದೆ.
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪ-ನಿರ್ದೇಶಕ ಕೆ.ಕೆ.ಚವ್ಹಾಣ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಭುಲಿಂಗ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದವರು. ಕಾರ್ಯಕ್ರಮದಲ್ಲಿ ಎಸಿಡಿಪಿಒ ಸಿದ್ದಲಿಂಗಪ್ಪ ಕೋರವಾರ, ಶಾಂತೂ ರಾಣಾಗೋಳ, ಭೀಮು ವಾಲೀಕಾರ, ರಜತ ತಾಂಬೆ, ಸರಸ್ವತಿ ಉಮೇಶ ಗಂಗನಳ್ಳಿ, ಪ್ರತಿಭಾ ಕುರುಡೆ, ವಿಜು ಸೇರಿದಂತೆ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಸಿಬ್ಬಂದಿಗಳು ಉಪಸ್ಥಿತರಿದ್ದರು.
“ಸರಕಾರ ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲಿ. ಅವರ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತಂದು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವೆ. ಮುಂಬರುವ ದಿನಮಾನಗಳಲ್ಲಿ ಅಂಗನವಾಡಿ ಸ್ವಂತ ಕಟ್ಟಡ ನಿರ್ಮಾಣ ಮಾಡಿಕೊಡುವೆ.”
– ಅಶೋಕ ಮನಗೂಳಿ, ಶಾಸಕರು

