Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾರಿ ನಿರ್ದೇಶನಾಲಯದ ವಶಕ್ಕೆ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ!
(ರಾಜ್ಯ ) ಜಿಲ್ಲೆ

ಜಾರಿ ನಿರ್ದೇಶನಾಲಯದ ವಶಕ್ಕೆ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ | ನಾಗೇಂದ್ರ ಅವರ ಮನೆ ಸೇರಿದಂತೆ ೪ ಕಡೆ ಇಡಿ ದಾಳಿ | ರಾಜ್ಯ ಸರ್ಕಾರಕ್ಕೆ ಎದುರಾಗಲಿರುವ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಅಕ್ರಮ ವರ್ಗಾವಣೆ ಹಗರಣದ ಸಂಬಂಧ ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆಯನ್ನು ಎದುರಿಸುತ್ತಿರುವ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಂತರ ವಶಕ್ಕೆ ಪಡೆದಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ₹185 ಕೋಟಿಗಳಿಗೂ ಹೆಚ್ಚಿನ ಅವ್ಯವಹಾರದ ಹಿನ್ನೆಲೆಯಲ್ಲಿ, ನಾಗೇಂದ್ರ ಅವರ ಡಾಲರ್ಸ್ ಕಾಲೋನಿಯ ಮನೆ ಸೇರಿದಂತೆ, ಸಂಬಂಧಿಸಿದ ಆಸ್ತಿಗಳಿರುವ ಬಿಇಎಲ್ ರೋಡ್, ಮತ್ತಿಕೆರೆ ಹಾಗೂ ಮಲ್ಲೇಶ್ವರಂ ಸೇರಿದಂತೆ ನಾಲ್ಕು ಕಡೆ ಇಡಿ ದಾಳಿ ನಡೆಸಿತ್ತು.
ಬಹುಕೋಟಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಶಾಸಕ ನಾಗೇಂದ್ರ ಹಾಗೂ ಕಾಂಗ್ರೆಸ್‌ ಶಾಸಕ ಬಸವನಗೌಡ ದದ್ದಲ್‌ ಅವರ ನಿನ್ನೆಯ ಸುಧೀರ್ಘ ವಿಚಾರಣೆಯ ಬೆನ್ನಲ್ಲೇ ಇಡಿ ಅಧಿಕಾರಿಗಳು ಇಂದು ಮುಂಜಾನೆಯಿಂದ ಹಠಾತ್‌ ದಾಳಿ ನಡೆಸಿ ಶಾಸಕ ನಾಗೇಂದ್ರರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.
ಮತ್ತೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದ ಮರುದಿನವೇ ಇಡಿ ಅಧಿಕಾರಿಗಳು ಶಾಸಕರಾದ ನಾಗೇಂದ್ರ, ಬಸನಗೌಡ ದದ್ದಲ್‌, ಯೂನಿಯನ್ ಬ್ಯಾಂಕ್ ಬ್ರಾಂಚ್ ಹೆಡ್ ಸುಚಿ ಸ್ಮಿತಾ, ಕ್ರೆಡಿಟ್‌ ಆಫೀಸರ್ ಕೃಷ್ಣಮೂರ್ತಿ, ಬ್ರಾಂಚ್ ಹೆಡ್ ದೀಪಾ ಮುಂತಾದವರ ಮನೆಗಳ ಮೇಲೂ ದಾಳಿ ನಡೆದ್ದು, ಪರಿಶೀಲನೆ ನಡೆಸಲಾಗುತ್ತಿದೆ. ನಿಗಮದ ಎಂಡಿ ಜೆ.ಜೆ.ಪದ್ಮನಾಭ್, ಲೆಕ್ಕಪರಿಶೋಧಕ ಪರಶುರಾಮ್ ಮನೆ ಮೇಲೂ ದಾಳಿ ನಡೆಸಲಾಗಿದೆ.
ನಾಗೇಂದ್ರ ಆಪ್ತ ಎನ್ನಲಾದ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ್ ವರ್ಮಾ ಸೇರಿ ಹಲವರ ಮನೆ, ಕಚೇರಿಯಲ್ಲೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ರಾಯಚೂರಿನಲ್ಲಿರುವ ನಿಗಮದ ಅಧ್ಯಕ್ಷ ದದ್ದಲ್ ನಿವಾಸದ ಮೇಲೆ ದಾಳಿ ನಡೆದಿದೆ.
ಬೆಂಗಳೂರಿನ ಪದ್ಮನಾಭನಗರ ನಿವಾಸ, ಹೈದರಾಬಾದ್‌ನಲ್ಲಿರುವ ಸತ್ಯನಾರಾಯಣ್ ವರ್ಮಾ ನಿವಾಸ ಕಚೇರಿ ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಹಾಗೂ ದದ್ದಲ್ ಇಬ್ಬರೂ ಎಸ್‌ಐಟಿ ಮುಂದೆ ಹಾಜರಾಗಿ ವಿಚಾರಣೆ ಎದುರಿಸಿದ್ದರು. ಬುಧವಾರವೂ ಸಹ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿತ್ತು.
ಹಗರಣದ ಸಂಬಂಧ ಶಾಸಕ ಬಸನಗೌಡ ದದ್ದಲ್‌ ಅವರ ರಾಯಚೂರಿನ ಮನೆ ಕಚೇರಿಗಳ‌ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಈ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಪ್ರತ್ಯೇಕ ತನಿಖೆಯನ್ನು ಕೈಗೊಂಡಿರುವುದರಿಂದ ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗಲಿದೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ₹183 ಕೋಟಿ ಅವ್ಯವಹಾರ ನಡೆದಿತ್ತು. ಇದರ ವ್ಯಾಪ್ತಿ ಕೆಳಹಂತದ ಅಧಿಕಾರಿಗಳಿಂದ ಹಿಡಿದು ಮೇಲಿನವರೆಗೂ ವ್ಯಾಪಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಚಂದ್ರಶೇಖರ್‌ ಡೆತ್‌ನೋಟ್‌ನಲ್ಲಿಯೂ ಸಚಿವರ ಬಗ್ಗೆ ಉಲ್ಲೇಖ ಇದೆ ಎನ್ನಲಾಗಿದೆ.

public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.