Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವ ಜನಸಂಖ್ಯಾ ದಿನಾಚರಣೆ ಜನಜಾಗೃತಿ ರ‍್ಯಾಲಿಗೆ ಚಾಲನೆ
(ರಾಜ್ಯ ) ಜಿಲ್ಲೆ

ವಿಶ್ವ ಜನಸಂಖ್ಯಾ ದಿನಾಚರಣೆ ಜನಜಾಗೃತಿ ರ‍್ಯಾಲಿಗೆ ಚಾಲನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕಾ ಆರೋಗ್ಯಾಧಿಕಾರಿಗಳ ಹಾಗೂ ವಿವಿಧ ನರ್ಸಿಂಗ್ ಕಾಲೇಜಗಳು ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಏರ್ಪಡಿಸಿದ ಜಿಲ್ಲಾಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆಯ ಜನಜಾಗೃತಿ ರ‍್ಯಾಲಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉತ್ತರ ಕರ್ನಾಟಕ ಉಪನಿರ್ದೇಶಕ ಡಾ|| ಚನ್ನಮ್ಮ ಕಟ್ಟಿ, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಬಸವರಾಜ ಹುಬ್ಬಳಿ ರವರು ಜಂಟಿಯಾಗಿ ಹಸಿರು ನಿಶಾನೆ ತೋರಿಸಿ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉತ್ತರ ಕರ್ನಾಟಕ ಉಪನಿರ್ದೇಶಕ ಡಾ|| ಚನ್ನಮ್ಮ ಕಟ್ಟಿ ಅವರು ಮಾತನಾಡಿ ಮಿತಿಮೀರಿದ ಜನಸಂಖ್ಯೆ ದೇಶದ ಅಭಿವೃದ್ದಿಗೆ ಮಾರಕವಾಗಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಜಾಗೃತಿ ಅತ್ಯವಶ್ಯಕವಾಗಿದೆ. ಪ್ರತಿಯೊಬ್ಬರಲ್ಲೂ ತಿಳುವಳಿಕೆ ಮೂಡಬೇಕು ಅಂದಾಗ ಮಾತ್ರ ಜನಸಂಖ್ಯೆ ನಿಯಂತ್ರಣ ಸಾಧ್ಯವಾಗುತ್ತದೆ ಎಂದು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಬಸವರಾಜ ಹುಬ್ಬಳಿ ಅವರು ಮಾತನಾಡಿ, ದೇಶದಲ್ಲಿ ಪ್ರತಿ ವರ್ಷ ೧ ಕೋಟಿ ೫೫ ಲಕ್ಷ ಜನಸಂಖ್ಯೆ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಪ್ರತಿ ವರ್ಷ ೭ ಲಕ್ಷ ೭೫ ಸಾವಿರದಷ್ಟು ಜನಸಂಖ್ಯೆ ಹೆಚ್ಚವರಿಯಾಗುತ್ತಿದೆ. ಈ ವೇಗದಲ್ಲಿ ಜನಸಂಖ್ಯೆಯು ಬೆಳೆಯುತ್ತಿದ್ದರೆ ಭಾರತವು ಮುಂದಿನ ೩೫ ವರ್ಷಗಳಲ್ಲಿ ೨೦೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಲಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಸೂಕ್ತ ಜಾಗೃತಿ ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ತಿಳುವಳಿಕೆ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಜನಜಾಗೃತಿ ರ‍್ಯಾಲಿಯು ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ಚೌಕ ಮಾರ್ಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯಕ್ಕೆ ಬಂದು ಕಾರ್ಯಕ್ರಮ ಮುಕ್ತಾಯವಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ|| ರಾಜೇಶ್ವರಿ ಗೊಲಗೇರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ಕವಿತಾ ದೊಡ್ಡಮನಿ, ಜಿಲ್ಲಾ ಕುಷ್ಟರೋಗ ನಿರ್ಮೂಲನಾ ಅಧಿಕಾರಿ ಡಾ|| ಸಂಪತ್ತ ಗುಣಾರಿ, ತಾಲೂಕಾ ಆರೋಗ್ಯ ಅಧಿಕಾರಿ ಡಾ|| ಪರಶುರಾಮ ಹಿಟ್ನಳ್ಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಿ ಎಮ್ ಕೊಲೂರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ, ಶ್ರೀಮತಿ ರೇಖಾ ದಶವಂತ, ಸರ್ಕಾರಿ ನರ್ಸಿಂಗ್ ಕಾಲೇಜ ಬೋಧಕರು ಮತ್ತು ವಿವಿಧ ನರ್ಸಿಂಗ್ ಕಾಲೇಜಗಳ ಉಪನ್ಯಾಸಕರು ಹಾಗೂ ಇಲಾಖೆಯ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಯವರು ಉಪಸ್ಥಿತರಿದ್ದರು. ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್ ಬಾಗವಾನ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.